News Karnataka Kannada
Friday, May 03 2024
ದೆಹಲಿ

ಹೋಳಿ ಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್

Modi N Kovind
Photo Credit : Twitter

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ದೇಶದ ಜನತೆಗೆ ಬಣ್ಣಗಳ ಹಬ್ಬ ಹೋಳಿ ಹಬ್ಬದ ಶುಭಾಶಯ ಕೋರಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ನಿಮ್ಮೆಲ್ಲರಿಗೂ ಹೋಳಿ ಹಬ್ಬದ ಶುಭಾಶಯಗಳು.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟ್ವೀಟ್ ಮಾಡಿ, ಹೋಳಿ ಹಬ್ಬದ ಈ ಶುಭ ಸಂದರ್ಭದಲ್ಲಿ ದೇಶದ ಎಲ್ಲಾ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ.

ಪರಸ್ಪರ ಪ್ರೀತಿ, ವಾತ್ಸಲ್ಯ ಮತ್ತು ಭ್ರಾತೃತ್ವದ ಸಂಕೇತವಾದ ಈ ಬಣ್ಣದ ಹಬ್ಬವು ನಿಮ್ಮ ಜೀವನದಲ್ಲಿ ಪ್ರತಿಯೊಂದರಲ್ಲೂ ಸಂತೋಷದ ಬಣ್ಣವನ್ನು ತರಲಿ ಎಂದು ಹೇಳಿದ್ದಾರೆ.

ಬಣ್ಣಗಳ ಹಬ್ಬವಾದ ಹೋಳಿಯು ಸಮುದಾಯದ ಸೌಹಾರ್ದತೆ ಮತ್ತು ಸಾಮರಸ್ಯದ ಜೀವಂತ ಉದಾಹರಣೆಯಾಗಿದೆ. ಇದು ವಸಂತ ಆಗಮನದ ಜೊತೆಗೆ ಶುಭ ಸುದ್ದಿಯನ್ನು ತರುತ್ತದೆ. ಈ ಹಬ್ಬವು ದೇಶದ ಜನತೆಯ ಜೀವನದಲ್ಲಿ ಸಂತೋಷ, ಉತ್ಸಾಹ ಮತ್ತು ಹೊಸ ಶಕ್ತಿಯನ್ನು ತುಂಬಲಿ ಎಂದು ಆಶಿಸುತ್ತೇನೆಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು