News Karnataka Kannada
Sunday, May 19 2024
ದೆಹಲಿ

10 ಕಿ.ಮೀ​ ಓಡುತ್ತಲೇ ಮನೆ ಸೇರುವ ಪ್ರದೀಪ್ ಮೆಹ್ರಾಗೆ ಸಿಹಿ ಸುದ್ದಿಕೊಟ್ಟ ದೆಹಲಿ ಸರಕಾರ

Photo Credit :

ಕೆಲಸ ಮುಗಿಸಿ ಮಧ್ಯರಾತ್ರಿ 10 ಕಿಲೋ ಮೀಟರ್​ ಓಡುತ್ತಲೇ ಮನೆ ಸೇರುವ 19 ವರ್ಷದ ಯುವಕ ಪ್ರದೀಪ್ ಮೆಹ್ರಾನ ವಿಡಿಯೋ ಇತ್ತೀಚೆಗೆ ಸಿಕ್ಕಾಪಟ್ಟೆ ವೈರಲ್​ ಆಗಿತ್ತು. ಎಲ್ಲೆಡೆ ಆತನ ಕನಸಿನ ಓಟಕ್ಕೆ ಬೆಂಬಲ ಸೂಚಿಸಿದ್ದಾರೆ.

ಇದೀಗ ಅನಾರೋಗ್ಯದಿಂದ ಬಳಲುತ್ತಿರುವ ಪ್ರದೀಪ್​ ಮೆಹ್ರಾ ತಾಯಿಗೆ ದೆಹಲಿ ಸರ್ಕಾರ ಉಚಿತವಾಗಿ ಚಿಕಿತ್ಸೆ ನೀಡುವುದಾಗಿ ಘೋಷಿಸಿದೆ.

ಭಾರತೀಯ ಸೇನೆ ಸೇರುವ ಉದ್ದೇಶದಿಂದ ಯುವಕ ಪ್ರತಿದಿನ 10 ಕಿಲೋ ಮೀಟರ್ ಓಡುತ್ತಲೇ ತನ್ನ ಮನೆ ಸೇರಿಕೊಳ್ಳುತ್ತಿದ್ದ. ಈತನ ತಾಯಿ ಅನಾರೋಗ್ಯಪೀಡಿತರಾಗಿದ್ದು ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ವಿಷಯವನ್ನು ಖುದ್ದಾಗಿ ಆತನೇ ವಿಡಿಯೋದಲ್ಲಿ ಹೇಳಿಕೊಂಡಿದ್ದ. ಇದೀಗ ಸಿಎಂ ಅರವಿಂದ್ ಕೇಜ್ರಿವಾಲ್​ ಸರ್ಕಾರ ಸಹಾಯಹಸ್ತ ಚಾಚಿದ್ದು, ಉಚಿತವಾಗಿ ಚಿಕಿತ್ಸೆ ನೀಡುವ ಭರವಸೆ ನೀಡಿದೆ.

ಈಗಾಗಲೇ ಭಾರತೀಯ ಸೇನೆ ಸೇರಲು ಮುಂದಾಗಿರುವ ಪ್ರದೀಪ್​ಗೆ ನಿವೃತ್ತ ಲೆಫ್ಟಿನೆಂಟ್​ ಜನರಲ್​ ಸತೀಶ್ ದುವಾ, ಭಾರತೀಯ ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಕಲ ರೀತಿಯಿಂದಲೂ ತಾವು ಸಹಾಯ ಮಾಡುವುದಾಗಿ ನಿನ್ನೆ ಪ್ರಕಟಿಸಿದ್ದರು.

ಸೇನಾ ಕಮಾಂಡರ್​​ ಲೆಫ್ಟಿನೆಂಟ್ ಜನರಲ್​ ರಾಣಾ ಅವರೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದು, ತಮ್ಮ ರೆಜಿಮೆಂಟ್​​ನಲ್ಲಿ ನೇಮಕಾತಿ ಮಾಡಿಕೊಳ್ಳಲು ತರಬೇತಿ ನೀಡುವುದಾಗಿ ತಿಳಿಸಿದ್ದಾಗಿ ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು