News Karnataka Kannada
Thursday, May 02 2024
ದೆಹಲಿ

ರಕ್ಷಣಾ ಸಚಿವಾಲಯದಲ್ಲಿ ಶೇ.10ರಷ್ಟು ಹುದ್ದೆ ಅಗ್ನಿವೀರರಿಗೆ ಮೀಸಲು: ರಾಜನಾಥ್ ಸಿಂಗ್

Rajnath Singh
Photo Credit : Twitter

ದೆಹಲಿ: ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ ಶೇ.10ರಷ್ಟು ಹುದ್ದೆಗಳನ್ನ ಅಗ್ನಿವೀರರಿಗೆ ಮೀಸಲಿಡುವ ಪ್ರಸ್ತಾವನೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶನಿವಾರ ಅನುಮೋದನೆ ನೀಡಿದ್ದಾರೆ.

ಭಾರತೀಯ ಕೋಸ್ಟ್ ಗಾರ್ಡ್ ಮತ್ತು ರಕ್ಷಣಾ ನಾಗರಿಕ ಹುದ್ದೆಗಳು ಮತ್ತು ಎಲ್ಲಾ 16 ರಕ್ಷಣಾ ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಶೇ. 10ರಷ್ಟು ಮೀಸಲಾತಿ ಜಾರಿಗೆ ತರಲಾಗುವುದು ಎಂದು ಸಚಿವಾಲಯ ಸರಣಿ ಟ್ವೀಟ್ ಮಾಡಿದೆ.

ಈ ಮೀಸಲಾತಿಯು ಮಾಜಿ ಸೈನಿಕರಿಗೆ ಅಸ್ತಿತ್ವದಲ್ಲಿರುವ ಮೀಸಲಾತಿಯ ಜೊತೆಗೆ ಇರುತ್ತದೆ. ‘ಈ ನಿಬಂಧನೆಗಳನ್ನು ಜಾರಿಗೆ ತರಲು ಸಂಬಂಧಿತ ನೇಮಕಾತಿ ನಿಯಮಗಳಿಗೆ ಅಗತ್ಯ ತಿದ್ದುಪಡಿ ಕೈಗೊಳ್ಳಲಾಗುವುದು. ರಕ್ಷಣಾ ಸಾರ್ವಜನಿಕ ವಲಯದ ಉದ್ದಿಮೆಗಳು ತಮ್ಮ ನೇಮಕಾತಿ ನಿಯಮಗಳಿಗೆ ಇದೇ ರೀತಿಯ ತಿದ್ದುಪಡಿ ಮಾಡಲು ಸಲಹೆ ನೀಡಲಾಗುವುದು. ಅಗತ್ಯ ವಯೋಮಿತಿ ಸಡಿಲಿಕೆ ಸಹ ಮಾಡಲಾಗುವುದು’ ಎಂದು ಸಚಿವಾಲಯ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು