ನವದೆಹಲಿ: ಇದೀಗ ದೇಶಾದ್ಯಂತ ಮಾರ್ಚ್ 16ರ ಬುಧವಾರದಿಂದ 12-14ನೇ ವಯೋಮಾನದ ಎಲ್ಲಾ ಮಕ್ಕಳಿಗೆ ಕೊರೋನಾ ಲಸಿಕೆ ನೀಡೋದಕ್ಕೆ ಪ್ರಾರಂಭಿಸಲಾಗುತ್ತದೆ ಎಂಬುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಈಗಾಗಲೇ ದೇಶದಲ್ಲಿ 15 ರಿಂದ 18ನೇ ವರ್ಷದ ಮಕ್ಕಳಿಗೆ ಕೊರೋನಾ ಲಸಿಕೆಯಾದಂತ ಕೋವ್ಯಾಕ್ಸಿನ್ ನೀಡಲಾಗಿತ್ತು.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಕೇಂದ್ರ ಆರೋಗ್ಯ ಸಚಿವ ಡಾ.ಮನ್ಸುಖ್ ಮಾಂಡವೀಯಾ ಮಾಹಿತಿ ಹಂಚಿಕೊಂಡಿದ್ದು, ಕೋವಿಡ್19 ಲಸಿಕೆ 12-14 ವರ್ಷ ವಯಸ್ಸಿನವರಿಗೆ ಲಸಿಕೆಯನ್ನು ಮಾರ್ಚ್ 16 ರಿಂದ ಪ್ರಾರಂಭವಾಗಲಿದೆ. ಅಲ್ಲದೇ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ‘ಮುನ್ನೆಚ್ಚರಿಕೆ ಡೋಸ್’ ನೀಡಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.