Categories: ದೆಹಲಿ

13 ತಿಂಗಳ ರೈತರ ಹೋರಾಟ ಕೊನೆಗೂ ಅಂತ್ಯ

ನವದೆಹಲಿ: ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಒಪ್ಪಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಅದರಂತೆ 13 ತಿಂಗಳಿನಿಂದ ದೀರ್ಘಕಾಲ ನಡೆಸುತ್ತಿದ್ದ ಹೋರಾಟವನ್ನು ಅಂತ್ಯಗೊಳಿಸುವ ನಿರ್ಧಾರವನ್ನು ಸಂಯುಕ್ತ ಕಿಸಾನ್ ಮೋರ್ಚಾ ತೆಗೆದುಕೊಂಡಿರುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾದ ಐವರು ಸಮಿತಿ ಸದಸ್ಯರಲ್ಲಿ ಒಬ್ಬರಾದ ಅಶೋಕ್ ಧಾವ್ಲೆ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ನೂತನ ಕರಡು ಪ್ರಸ್ತಾಪ ನಮಗೆ ಲಭ್ಯವಾಗಿದ್ದು, ಈ ಬಗ್ಗೆ ಇಂದು ಸಂಯುಕ್ತ ಕಿಸಾಸ್ ಮೋರ್ಚಾ ಚರ್ಚೆ ನಡೆಸಿದೆ. ಪ್ರತಿಭಟನೆಯನ್ನು ಅಂತ್ಯಗೊಳಿಸುವುದಾಗಿ ಘೋಷಿಸುವ ಮೊದಲೇ ದೆಹಲಿ-ಹರ್ಯಾಣದ ಗಡಿಭಾಗದ ಸಿಂಘುವಿನಲ್ಲಿ ಹಾಕಿದ್ದ ಟೆಂಟ್ ಗಳನ್ನು ರೈತರು ತೆರವುಗೊಳಿಸಲು ಆರಂಭಿಸಿದ್ದರು. ನಾವು ಪ್ರತಿಭಟನೆ ಕೈಬಿಟ್ಟು ಮನೆಗಳಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದೇವೆ ಎಂದು ರೈತರು ತಿಳಿಸಿದ್ದರು.

ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆಯನ್ನು ರದ್ದುಗೊಳಿಸಬೇಕು ಹಾಗೂ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ 2020ರ ನವೆಂಬರ್ 26ರಿಂದ ಸಂಯುಕ್ತ ಕಿಸಾನ್ ಮೋರ್ಚಾ ದೆಹಲಿಯ ಮೂರು ಗಡಿಭಾಗಗಳಾದ ಸಿಂಘು, ಗಾಜಿಪುರ್ ಹಾಗೂ ಟಿಕ್ರಿಯಲ್ಲಿ ಪ್ರತಿಭಟನೆ ನಡೆಸಲು ಆರಂಭಿಸಿದ್ದರು. ದೀರ್ಘ ಒಂದು ವರ್ಷಗಳ ಕಾಲದಿಂದ ರೈತರು ಹೋರಾಟ ನಡೆಸುತ್ತಿದ್ದು, ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೂರು ಕಾಯ್ದೆಯನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು. ಅದರಂತೆ ಲೋಕಸಭೆಯಲ್ಲಿ ಕಾಯ್ದೆಯನ್ನು ರದ್ದುಗೊಳಿಸಲಾಗಿತ್ತು.

Swathi MG

Recent Posts

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

4 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

46 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

48 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

1 hour ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

2 hours ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 hours ago