ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 13,313 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.
ಕಳೆದ 24 ಗಂಟೆಯಲ್ಲಿ 13,313 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ನೀಡಿದೆ.
ಕಳೆದ 24 ಗಂಟೆಯಲ್ಲಿ 38 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 524941 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 13,313 ಹೊಸ ಪ್ರಕರಣಗಳು, 10,972 ಚೇತರಿಕೆಗಳು ಮತ್ತು 38 ಸಾವುಗಳು ವರದಿಯಾಗಿವೆ.