News Karnataka Kannada
Monday, April 29 2024
ದೆಹಲಿ

ದೆಹಲಿ: ರಾಹುಲ್‌ ಗಾಂಧಿ ಸೇರಿದಂತೆ 18 ಮಂದಿ ಕಾಂಗ್ರೆಸ್‌ ನಾಯಕರು ದೆಹಲಿ ಪೊಲೀಸರ ವಶಕ್ಕೆ

18 Congress leaders, including Rahul Gandhi, detained by Delhi Police
Photo Credit : Twitter

ದೆಹಲಿ: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ಇಡಿ ಅಧಿಕಾರಿಗಳು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್‌ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಗಾಗಲೇ ರಾಹುಲ್ ಗಾಂಧಿ ಅವರನ್ನು ಹಲವು ಬಾರಿ ವಿಚಾರಣೆ ನಡೆಸಿರುವ ಇಡಿ ಎರಡು ದಿನಗಳಿಂದ ಸೋನಿಯಾ ಗಾಂಧಿ ಅವರನ್ನೂ ವಿಚಾರಣೆ ನಡೆಸುತ್ತಿದೆ. ಇದನ್ನು ವಿರೋಧಿಸಿ ಕಾಂಗ್ರೆಸ್ ಸಂಸದರು ಹಾಗೂ ಪ್ರಮುಖ ನಾಯಕರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಡಿ ಪ್ರಕರಣದ ಜತೆಗೆ ಬೆಲೆ ಏರಿಕೆ ಹಾಗೂ ಜಿಎಸ್‌ಟಿ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಸಂಸತ್‌ ಆವರಣದಿಂದ ವಿಜಯ್‌ ಚೌಕ್‌ವರೆಗೆ ನಡೆಸುತ್ತಿದ್ದ ಪಾದಯಾತ್ರೆಯನ್ನು ಪೊಲೀಸರು ತಡೆದಿದ್ದಾರೆ.

ಹಾಗಾಗಿ ಪೊಲೀಸರು ಹಾಗೂ ಕಾಂಗ್ರೆಸ್‌ ನಾಯಕರ ನಡುವೆ ಮಾತಿನ ಚಕಮಕಿ ನಡೆದು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಬಂಧಿತರಲ್ಲಿ ದೀಪೇಂದರ್ ಹೂಡಾ ಮತ್ತು ಮಲ್ಲಿಕಾರ್ಜುನ ಖರ್ಗೆ ಕೂಡ ಇದ್ದಾರೆ. ಪೊಲೀಸರ ಸೂಚನೆ ಮೇರೆಗೆ ಪ್ರತಿಭಟನೆ ನಡೆಸುತ್ತಿದ್ದು, ಬಂಧಿಸಿರುವುದು ಕಾನೂನು ಬಾಹಿರ ಎಂದು ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು