News Karnataka Kannada
Friday, May 03 2024
ದೆಹಲಿ

ಆನ್‌ಲೈನ್‌ ವಂಚನೆಯಿಂದ 2 ಲಕ್ಷ ರೂ. ಕಳೆದುಕೊಂಡ ವಿದ್ಯಾರ್ಥಿ ಆತ್ಮಹತ್ಯೆ

ಹನ್ನೊಂದನೇ ತರಗತಿಯ ಯುವಕ  ತಾಯಿಯ ಮೊಬೈಲ್‌ನಲ್ಲಿ ಗೇಮ್‌ ಆಡುತ್ತಿದ್ದ ವೇಳೆ  ವಂಚಕರು ಆ ಮೊಬೈಲ್‌ ಗೆ ಲಿಂಕ್‌ ಕಳುಹಿಸಿ ಆತನ ತಂದೆಯ ಬ್ಯಾಂಕ್‌ ಅಕೌಂಟ್‌ನಿಂದ ಸುಮಾರು 2 ಲಕ್ಷ ರೂ. ದೋಚಿದ್ದರು. ಇದರಿಂದ ಮನನೊಂದು ಆತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
Photo Credit : NewsKarnataka

ನವದೆಹಲಿ: ಹನ್ನೊಂದನೇ ತರಗತಿಯ ಯುವಕ  ತಾಯಿಯ ಮೊಬೈಲ್‌ನಲ್ಲಿ ಗೇಮ್‌ ಆಡುತ್ತಿದ್ದ ವೇಳೆ  ವಂಚಕರು ಆ ಮೊಬೈಲ್‌ ಗೆ ಲಿಂಕ್‌ ಕಳುಹಿಸಿ ಆತನ ತಂದೆಯ ಬ್ಯಾಂಕ್‌ ಅಕೌಂಟ್‌ನಿಂದ ಸುಮಾರು 2 ಲಕ್ಷ ರೂ. ದೋಚಿದ್ದರು. ಇದರಿಂದ ಮನನೊಂದು ಆತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಮುಂಬೈನ ನಲಸೊಪರದ ಯುವಕ ಏಪ್ರಿಲ್‌ 3 ರಂದು ತನ್ನ ತಾಯಿಯ ಮೊಬೈಲ್‌ನಲ್ಲಿ ಗೇಮ್‌ ಆಡುತ್ತಿದ್ದ. ಆ ವೇಳೆ  ವಂಚಕರು ಲಿಂಕ್‌ ಒಂದನ್ನು ಮೊಬೈಲ್‌ಗೆ ಕಳುಹಿಸಿದ್ದರು. ಆತ ತಪ್ಪಿ ಆ ಲಿಂಕ್‌ ಮೇಲೆ ಕ್ಲಿಕ್‌ ಮಾಡಿದ್ದನು. ಇದರಿಂದ ವಂಚಕರು ಆತನ ತಂದೆಯ ಎಲ್ಲ ಮಾಹಿತಿಯನ್ನು ಪಡೆದುಕೊಂಡು ಅಕೌಂಟ್‌ನಿಂದ 2 ಲಕ್ಷ ರೂ. ಡ್ರಾ ಮಾಡಿದ್ದರು.

ನಗದು ಡ್ರಾ ಆಗಿರುವ ಬಗ್ಗೆ ಬ್ಯಾಂಕ್‌ನಿಂದ ಬಂದ ಮೆಸೇಜ್‌ ಕುರಿತು ಆತ ಯಾರಿಗೂ ತಿಳಿಸಿರಲಿಲ್ಲ. ಮಗ ಮೃತಪಟ್ಟ ಬಳಿಕ ಮಹಿಳೆ ಈ ಮೆಸೇಜ್‌ ಗಮನಿಸಿದ್ದರು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೆತ್ತವರ ಭಯದಿಂದ ಆತ ಕೀಟನಾಶಕವನ್ನು ಸೇವಿಸಿದ್ದನು.  ಬಾಯಿಯಲ್ಲಿ ನೊರೆ ಬರಲು ಪ್ರಾರಂಭಿಸಿದಾಗ ತಾಯಿ ಕೂಡಲೇ ಅವನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಆತ ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಒಂದು ವೇಳೆ ಆ ಯುವಕ ಅಕೌಂಟ್‌ನಿಂದ ಹಣ ವಿತ್‌ ಡ್ರಾ ಆಗಿರುವ ಬಗ್ಗೆ ಹೇಳಿಕೊಂಡಿದ್ದರೆ ಅದನ್ನು 24 ಗಂಟೆಯೊಳಗೆ ಮರಳಿ ಪಡೆಯಬಹುದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಕೂಡಲೇ ಬ್ಯಾಂಕ್‌ ಅಧಿಕಾರಿಗಳನ್ನು ಸಂಪರ್ಕಿಸಿ ಹಣ ವರ್ಗಾವಣೆಯನ್ನು ಸ್ಥಗಿತಗೊಳಿಸುವ ವ್ಯವಸ್ಥೆ ಇದೆ. ದೇಶಾದ್ಯಂತ ಸೈಬರ್‌ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಹದಿಹರೆಯದವರು ಮತ್ತು ಹಿರಿಯ ನಾಗರಿಕರೇ ವಂಚಕರ ಗುರಿ. ಈ ಬಗ್ಗೆ ಎಲ್ಲರೂ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು