News Karnataka Kannada
Monday, April 29 2024
ದೆಹಲಿ

20,000 ರೈತರಿಂದ ನಾಳೆ `ದೆಹಲಿ ಚಲೋ’: ರಾಜಧಾನಿಯಲ್ಲಿ ಬಿಗಿ ಭದ್ರತೆ

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು  200 ರೈತ ಸಂಘಟನೆಗಳು ಮಂಗಳವಾರ ದೆಹಲಿ ಚಲೋಗೆ ಕರೆ ನೀಡಿವೆ.
Photo Credit : News Kannada

ನವದೆಹಲಿ: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು  200 ರೈತ ಸಂಘಟನೆಗಳು ಮಂಗಳವಾರ ದೆಹಲಿ ಚಲೋಗೆ ಕರೆ ನೀಡಿವೆ.

ಈ ಹಿನ್ನೆಲೆಯಲ್ಲಿ ರೈತರು ಅಂಬಾಲ-ಸಿಂಘು, ಕನೌರಿ-ಜಿಂದ್, ಮತ್ತು ದಬಾವಲಿ ಗಡಿಗಳ ಮೂಲಕ ರಾಜಧಾನಿ ಪ್ರವೇಶಕ್ಕೆ ರೈತರು ಯೋಜಿಸಿದ್ದಾರೆ. ಈಗಾಗಲೇ ಪಂಜಾಬ್ ಹಾಗೂ ಹರಿಯಾಣದ ಟ್ರ್ಯಾಕ್ಟರ್‌ಗಳಲ್ಲಿ ಹೊರಟಿದ್ದಾರೆ.

ದೆಹಲಿ ಚಲೋ’ ನಲ್ಲಿ ಸುಮಾರು 20,000 ರೈತರು ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಹೈಅಲರ್ಟ್ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ದೆಹಲಿಯ ಗಡಿ ಭಾಗಗಳನ್ನ ಬ್ಯಾರಿಕೇಡ್‌ಗಳಿಂದ  ಬಂದ್ ಮಾಡಲಾಗಿದೆ.  ಈಗಾಗಲೇ ಹಲವು ಕಡೆ ಗಡಿಗಳನ್ನು ಬ್ಯಾರಿಕೇಡ್‌ಗಳಿಂದ ಬಂದ್ ಮಾಡಲಾಗಿದೆ.

ಗಡಿಗಳಲ್ಲಿ ಕ್ರೇನ್ ಮತ್ತು ಕಂಟೇನರ್‌ಗಳನ್ನು ತಂದಿಡಲಾಗಿದ್ದು, ರೈತರು ದೆಹಲಿ ಪ್ರವೇಶ ಮಾಡಲು ಯತ್ನಿಸಿದ್ರೆ ಹೆದ್ದಾರಿಯನ್ನೇ ಬಂದ್ ಮಾಡಲು ಪೊಲೀಸರು ಯೋಜಿಸಿದ್ದಾರೆ. ಯಾವುದೇ ಅನಾಹುತಕಾರಿ ಘಟನೆಗಳನ್ನು ತಡೆಯಲು ಹೆಚ್ಚುವರಿ ಪೊಲೀಸ್ ಭದ್ರತೆಯನ್ನ ಆಯಕಟ್ಟಿನ ಸ್ಥಳಗಳಲ್ಲಿ ನಿಯೋಜಿಸಲಾಗಿದೆ.

ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಈ ಪ್ರತಿಭಟನೆಗೆ 200 ರೈತ ಸಂಘಟನೆಗಳು ಬೆಂಬಲ ನೀಡಿದ್ದು, ಸುಮಾರು 20,000 ರೈತರು ಪಾಲ್ಗೊಳ್ಳಲಿದ್ದಾರೆ ಎಂದು ಗುಪ್ತಚರ ಇಲಾಖೆ ಅಂದಾಜಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು