ನವದೆಹಲಿ: 2019ಕ್ಕೆ ಹೋಲಿಸಿದರೆ 2020ರಲ್ಲಿ ಮಕ್ಕಳ ವಿರುದ್ಧದ ಸೈಬರ್ ಅಪರಾಧ ಪ್ರಕರಣಗಳಲ್ಲಿ ಶೇ. 400ರಷ್ಟು ಹೆಚ್ಚಳವಾಗಿದೆ. ಇದರಲ್ಲಿ ಹೆಚ್ಚಿನದಾಗಿ ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಂಡು, ಅಶ್ಲೀಲವಾಗಿ ಚಿತ್ರಿಸಿ ಪ್ರಕಟಿಸಿಕೊಳ್ಳಲು ಬಳಸಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಅಪರಾಧಗಳ ದಾಖಲೆಯ ದಳ(ಎನ್ಸಿಆರ್ಬಿ)ದ ಡೇಟಾದಿಂದ ತಿಳಿದುಬಂದಿದೆ.
ಉತ್ತರ ಪ್ರದೇಶ(170), ಕರ್ನಾಟಕ (144), ಮಹಾರಾಷ್ಟ್ರ (137), ಕೇರಳ (107) ಮತ್ತು ಒಡಿಶಾ (71) ಈ ಐದು ರಾಜ್ಯಗಳಲ್ಲಿ ಮಕ್ಕಳ ವಿರುದ್ಧದ ಸೈಬರ್ ಅಪರಾಧಗಳು ಹೆಚ್ಚಾಗಿ ದಾಖಲಾಗಿವೆ ಎಂದು ಎನ್ಸಿಆರ್ಬಿ ವರದಿ ಹೇಳಿದೆ.