News Karnataka Kannada
Wednesday, May 01 2024
ದೆಹಲಿ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,208 ಕೊರೋನಾ ಪ್ರಕರಣ ಪತ್ತೆ

ರಾಜ್ಯದಲ್ಲಿ ಕೊರೊನಾ ಸೋಂಕು ತಾಂಡವವಾಡುವ ಸುಳಿವು ನೀಡಿದೆ. ಕೆಲ ದಿನಗಳಿಂದ ದಿನಕ್ಕೆ ಪಾಸಿಟಿವ್ ಕೇಸ್​ಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಇಂದು 158 ಜನರಿಗೆ ಕೊರೊನಾ ಸೋಂಕು ದೃಢ ಪಟ್ಟಿದ್ದರೆ, ಬೆಂಗಳೂರಿನಲ್ಲಿ ಇಂದು ಒಂದೇ ದಿನಕ್ಕೆ 85 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.
Photo Credit : Pixabay

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,208 ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,46,49,088ಕ್ಕೆ ಏರಿಕೆಯಾಗಿದೆ.

ಕಳೆದ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,28,999ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 19,398ಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 3,619 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,41,00,691ಕ್ಕೆ ತಲುಪಿದೆ.

ದೇಶದಲ್ಲಿ  ಒಂದೇ ದಿನ 1,42,704 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 90,05,59,796 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 2,19,60,45,500 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು