ನವದೆಹಲಿ: ಕರ್ನಾಟಕ ಸರ್ಕಾರವು ತಮಿಳುನಾಡಿಗೆ ನವೆಂಬರ್ 1ರಿಂದ 15ರವರೆಗೆ ಪ್ರತಿದಿನ 2600 ಕ್ಯೂಸೆಕ್ ಕಾವೇರಿ ನೀರು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ. ಸಮಿತಿ ಶಿಫಾರಸಿನಿಂದ ರಾಜ್ಯಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ.
ದೆಹಲಿಯಲ್ಲಿ ಸೋಮವಾರ ನಡೆದ ಸಮಿತಿ ಸಭೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಜಲಸಂಪನ್ಮೂಲ ಇಲಾಖೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಈ ಹಿಂದೆ ಅ.15ರಿಂದ 31ರವರೆಗೆ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಪ್ರಾಧಿಕಾರ ಆದೇಶ ಹೊರಡಿಸಿತ್ತು.