ದೆಹಲಿ

ನವದೆಹಲಿ: ದೆಹಲಿ ಕಟ್ಟಡ ಕುಸಿತ- 3 ಸಾವು, 9 ಜನರ ರಕ್ಷಣೆ

ನವದೆಹಲಿ: ಕೇಂದ್ರ ದೆಹಲಿಯ ಲಾಹೋರಿ ಗೇಟ್ ನಲ್ಲಿ ಕಟ್ಟಡ ಕುಸಿದು 4 ವರ್ಷದ ಬಾಲಕಿ ಸೇರಿದಂತೆ ಮೂವರು ಮೃತಪಟ್ಟು, 9 ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಭಾರಿ ಮಳೆಯಿಂದಾಗಿ ಭಾನುವಾರ ರಾತ್ರಿ ಕಟ್ಟಡ ಕುಸಿದಿದೆ.

ದೆಹಲಿ ಪೊಲೀಸರು ಐಪಿಸಿಯ ಸೆಕ್ಷನ್ 304 ಎ, 336, 337 ಮತ್ತು 338 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಇದು ಮೂರು ಅಂತಸ್ತಿನ ಕಟ್ಟಡ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಂಜೆ ೭.೩೦ ರ ಸುಮಾರಿಗೆ ಲಾಹೋರಿ ಗೇಟ್ ಪ್ರದೇಶದಲ್ಲಿ ಕುಸಿತದ ಬಗ್ಗೆ ಕರೆ ಬಂದಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ. ಫ್ರೇಶ್ ಖಾನಾ ಪ್ರದೇಶದಲ್ಲಿ ಮನೆಯ ಮೇಲ್ಛಾವಣಿ ಕುಸಿದಿದೆ ಎಂದು ಕರೆ ಮಾಡಿದದ್ದಾರೆ.

ಆರಂಭದಲ್ಲಿ, ಐದು ಅಗ್ನಿಶಾಮಕ ಯಂತ್ರಗಳನ್ನು ಸ್ಥಳಕ್ಕೆ ಸಾಗಿಸಲಾಯಿತು ಮತ್ತು ನಂತರ ಇಡೀ ಕಟ್ಟಡವು ಬಿದ್ದಿದೆ ಎಂದು ತಿಳಿದಾಗ ಹೆಚ್ಚಿನ ಅಗ್ನಿಶಾಮಕ ಎಂಜಿನ್ ಗಳನ್ನು ಕಳುಹಿಸಲಾಯಿತು.

“ಅವಶೇಷಗಳಡಿ ಸಿಲುಕಿದ್ದ ಐವರನ್ನು ಹೊರತೆಗೆಯಲಾಗಿದ್ದು, ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ” ಎಂದು ಅಧಿಕಾರಿ ಹೇಳಿದರು. ಸ್ಥಳೀಯ ಪೊಲೀಸರು ಸಹ ಸ್ಥಳಕ್ಕೆ ತಲುಪಿದರು ಮತ್ತು ಅಗ್ನಿಶಾಮಕ ದಳದವರಿಗೆ ಸಹಾಯ ಮಾಡುತ್ತಿದ್ದಾರೆ.

ನಂತರ ಅವಶೇಷಗಳಿಂದ ಇನ್ನೂ ನಾಲ್ಕು ಜನರನ್ನು ರಕ್ಷಿಸಲಾಯಿತು ಮತ್ತು ಅವರನ್ನು ಆಸ್ಪತ್ರೆಗೆ ಕಳುಹಿಸಲಾಯಿತು.

“ಒಟ್ಟು ಒಂಬತ್ತು ಜನರನ್ನು  ಆಸ್ಪತ್ರೆಗೆ ದಾಖಲಿಸಲಾಗಿದೆ. ಅಮರಾ (45), ನಿಲೋಫರ್ (50), ಮೊಹಮ್ಮದ್ ಇಮ್ರಾನ್ (40), ಸುಖ್ಬೀರ್ (34), ಅಂಕಿತ್ (28), ಅಶೋಕ್ (40) ಮತ್ತು ಸಯ್ಯದ್ ಜಿಶಾನ್ (30) ಗಾಯಗೊಂಡವರು. ಎಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಅಧಿಕಾರಿ ತಿಳಿಸಿದ್ದಾರೆ.

ಮೃತರಲ್ಲಿ 4 ವರ್ಷದ ಮಗುವೂ ಸೇರಿದ್ದು, ಆಸ್ಪತ್ರೆಗೆ ಬರುವಷ್ಟರಲ್ಲಿ ಆತ ಮೃತಪಟ್ಟಿದ ಎಂದು ಘೋಷಿಸಲಾಗಿತ್ತು.

Ashika S

Recent Posts

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

10 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

27 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

48 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

1 hour ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

1 hour ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

2 hours ago