ದೆಹಲಿ

40 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲು ಭಾರತೀಯ ವಿಜ್ಞಾನಿಗಳು ಶಿಫಾರಸು

ನವದೆಹಲಿ: ಕೊರೋನಾದ ಹೊಸ ರೂಪಾಂತರಿ ತಳಿ ಓಮಿಕ್ರಾನ್ ಪತ್ತೆಯಾಗಿದ್ದು, ಈ ಹೊಸ ಸೋಂಕು ಹರಡುತ್ತಿರುವ ಭೀತಿ ಎದುರಾಗಿತ್ತುದ್ದಂತೆಯೇ 40 ಹಾಗೂ ಮೇಲ್ಪಟ್ಟ ವಯಸ್ಸಿನವರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲು ಭಾರತೀಯ ವಿಜ್ಞಾನಿಗಳು ಶಿಫಾರಸು ಮಾಡಿದ್ದಾರೆ.

40 ವರ್ಷದ ವಯಸ್ಸಿನವರು ಹೊಸ ರೂಪಾಂತರಿ ವೈರಾಣುವಿನಿಂದ ಹೆಚ್ಚಿನ ಅಪಾಯ ಹಾಗೂ ಹೆಚ್ಚು ತೆರೆದುಕೊಳ್ಳುವ ಮಂದಿಯಾಗಿರುವುದರಿಂದ ಈ ವಯಸ್ಸಿನ ಜನಸಂಖ್ಯೆಗೆ ಬೂಸ್ಟರ್ ಡೋಸ್ ಲಸಿಕೆ ನೀಡಬಹುದೆಂಬ ಅಭಿಮನತ ಭಾರತೀಯ ವಿಜ್ಞಾನಿಗಳದ್ದಾಗಿದೆ.

ಭಾರತದ SARS-CoV-2 ಜೀನೋಮಿಕ್ಸ್ ಸೀಕ್ವೆನ್ಸಿಂಗ್ ಕನ್ಸೋರ್ಟಿಯಮ್ ನ ವಾರದ ಬುಲೆಟಿನ್ ನಲ್ಲಿ ಈ ಶಿಫಾರಸನ್ನು ಮಂಡಿಸಲಾಗಿದೆ. ಇನ್ನೂ ಲಸಿಕೆ ಪಡೆಯದ ಹೆಚ್ಚು ಅಪಾಯವನ್ನು ಎದುರಿಸಬಹುದಾದ ಮಂದಿಗೆ ಲಸಿಕೆ ಹಾಗೂ 40 ಕ್ಕಿಂತ ಹೆಚ್ಚಿನ ವಯಸ್ಸಿನಲ್ಲಿರುವ ಮಂದಿಗೆ ಬೂಸ್ಟರ್ ಡೋಸ್ ನೀಡುವುದನ್ನು ಸರ್ಕಾರ ಪರಿಗಣಿಸಬೇಕಿದೆ ಎಂದು ಜೀನೋಮಿಕ್ಸ್ ಸೀಕ್ವೆನ್ಸಿಂಗ್ ಕನ್ಸೋರ್ಟಿಯಮ್ ಸಲಹೆ ನೀಡಿದೆ.

ಲೋಕಸಭೆಯಲ್ಲಿ ಕೊರೋನಾ ಸಾಂಕ್ರಾಮಿಕ ಪರಿಸ್ಥಿತಿಯ ಚರ್ಚೆಯ ಸಂದರ್ಭದಲ್ಲೂ ಸಂಸದರು ಬೂಸ್ಟರ್ ಡೋಸ್ ಗಾಗಿ ಆಗ್ರಹಿಸಿದ್ದರು. ಈ ವೈರಾಣು ಸೋಂಕು ಇದೆಯೇ ಇಲ್ಲವೇ ಎಂಬುದನ್ನು ವೇಗವಾಗಿ ಪತ್ತೆ ಮಾಡುವುದಕ್ಕೆ ಜಿನೋಮಿಕ್ ಕಣ್ಗಾವಲು ಬಹಳ ಮುಖ್ಯವಾಗುತ್ತದೆ ಎಂದು ಐಎನ್ ಎಸ್‌ಎಸಿಒಜಿ ಹೇಳಿದೆ.

Gayathri SG

Recent Posts

ಖಾರವಾದ ಚಿಪ್ಸ್ ತಿಂದ 14ರ ಬಾಲಕನಿಗೆ ಹೃದಯ ಸ್ತಂಭನ

ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…

14 mins ago

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

31 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

59 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago