News Karnataka Kannada
Monday, April 29 2024
ದೆಹಲಿ

50 ಲಕ್ಷಕ್ಕೂ ಅಧಿಕ ಆರೋಗ್ಯ, ಮುಂಚೂಣಿ ಕಾರ್ಯಕರ್ತರಿಗೆ ಮುನ್ನೆಚ್ಚರಿಕೆ ನೀಡಿಕೆ ಲಸಿಕೆ- ಮನ್ಸುಖ್ ಮಾಂಡವೀಯಾ

Mansukh Mandavaia
Photo Credit : News Kannada

ನವದೆಹಲಿ: ಜನವರಿ 10 ರಿಂದ ಈವರೆಗೂ ಸುಮಾರು 50 ಲಕ್ಷ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ , ಅದಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕೆಯ ಕೋವಿಡ್-19 ಲಸಿಕೆ ನೀಡಲಾಗಿದೆ,ಜನವರಿ 10 ರಿಂದ 50 ಲಕ್ಷಕ್ಕೂ ಹೆಚ್ಚು ಆರೋಗ್ಯ ಮತ್ತು ಮುಂಚೂಣಿಯ ಕಾರ್ಯಕರ್ತರು ಮತ್ತು 60 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ನಾಗರಿಕರು ಮುನ್ನೆಚ್ಚರಿಕೆ ಡೋಸ್ ಅನ್ನು ಸ್ವೀಕರಿಸಿದ್ದಾರೆ. ಇದು ಮತ್ತೊಂದು ಮೈಲಿಗಲ್ಲು ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಮಂಗಳವಾರ ತಿಳಿಸಿದ್ದಾರೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಸುಮಾರು 80 ಲಕ್ಷ ಡೋಸ್ ಲಸಿಕೆ ನೀಡಲಾಗಿದೆ. ತಾತ್ಕಾಲಿಕ ವರದಿಗಳ ಪ್ರಕಾರ ಬೆಳಗ್ಗೆ 7 ಗಂಟೆಯವರೆಗೆ ದೇಶದಲ್ಲಿ ನೀಡಲಾದ ಕೋವಿಡ್-19 ಲಸಿಕೆ ಪ್ರಮಾಣವು 158.04 ಕೋಟಿ ಮೀರಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ.ಅರ್ಹರಾಗಿರುವ ಎಲ್ಲರೂ ತಮ್ಮ ಮುನ್ನೆಚ್ಚರಿಕೆ ಲಸಿಕೆಯನ್ನು ಶೀಘ್ರವಾಗಿ ಪಡೆಯಲು ವಿನಂತಿಸುವುದಾಗಿ ಮಾಂಡವೀಯಾ ಟ್ವೀಟ್ ಮಾಡಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು