ನವದೆಹಲಿ: ಇಲ್ಲಿನ ಇಂದಿರಾಗಾಂಧಿ ಅಂತರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ 47.75 ಕೋಟಿ ಮೌಲ್ಯದ 6.822 ಕೆಜಿ ಹೆರಾಯಿನ್ ಅನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಕ್ಯಾಮರೂನ್ ಪ್ರಜೆಗಳನ್ನು(ಮಧ್ಯ ಆಫ್ರಿಕಾ ದೇಶದ ಪ್ರಜೆಗಳು) ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಆರೋಪಿಗಳು ಮಲಾವಿಯಿಂದ ಅಡಿಸ್ ಅಬಾಬಾ ಮೂಲಕ ಐಜಿಐ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು ಎಂದು ಹಿರಿಯ ಕಸ್ಟಮ್ಸ್ ಅಧಿಕಾರಿ ತಿಳಿಸಿದ್ದಾರೆ. “ಹೆರಾಯಿನ್ ಅನ್ನು ಚೀಲದ ತಳದಲ್ಲಿ ಅಡಗಿಸಿಟ್ಟು ಸಾಗಾಟ ಮಾಡುತ್ತಿರುವುದನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಆರೋಪಿಗಳು ಎನ್ಡಿಪಿಎಸ್ ಕಾಯ್ದೆಯಡಿ ನಿಬಂಧನೆಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.