ದೆಹಲಿ

ಪಾತಾಳ್‌ ಕೋಟ್‌ ಎಕ್ಸ್‌ ಪ್ರೆಸ್‌ ರೈಲಿನಲ್ಲಿ ಬೆಂಕಿ ಅನಾಹುತ

ನವದೆಹಲಿ: ಇತ್ತೀಚೆಗೆ ರೈಲಿನಲ್ಲಿ ಬೆಂಕಿ ಕಾಣಿಸಿಕೊಳ್ಳುವ ದುರ್ಘಟನೆಗಳು ಹೆಚ್ಚುತ್ತಿವೆ. ಆಗ್ರಾ ನಿಲ್ದಾಣದ ಬಳಿ ಬುಧವಾರ ಮಧ್ಯಾಹ್ನ ಪಾತಾಳಕೋಟ್ ಎಕ್ಸ್‌ಪ್ರೆಸ್ ರೈಲಿನ ಕೋಚ್‌ಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದರೆ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಆಗ್ರಾ ರೈಲ್ವೆ ವಿಭಾಗದ ಪಿಆರ್‌ಒ ಪ್ರಶಸ್ತಿ ಶ್ರೀವಾಸ್ತವ ತಿಳಿಸಿದ್ದಾರೆ. ಎಕ್ಸ್‌ಪ್ರೆಸ್ ರೈಲು ಪಂಜಾಬ್‌ನ ಫಿರೋಜ್‌ಪುರ ಕಂಟೋನ್ಮೆಂಟ್ ಮತ್ತು ಮಧ್ಯಪ್ರದೇಶದ ಸಿಯೋನಿ ನಡುವೆ ಸಂಚರಿಸುತ್ತಿದ್ದು, ರೈಲು ಆಗ್ರಾ ನಿಲ್ದಾಣದಿಂದ ಹೊರಟ ಬಳಿಕ ಮಧ್ಯಾಹ್ನ 3.45 ಕ್ಕೆ ಎಂಜಿನ್ ಬಳಿಕದ
4 ನೇ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಬಳಿಕ ರೈಲನ್ನು ಸ್ಥಗಿತಗೊಳಿಸಿ ರೈಲು ಕೋಚ್‌ ಅನ್ನು ಸ್ಥಳಾಂತರ ಮಾಡಲಾಗಿದೆ.

Gayathri SG

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

3 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

26 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

42 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

1 hour ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago