ನವದೆಹಲಿ: ಮದ್ಯದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧನಕ್ಕೊಳಪಡಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಇಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಡಿಡಿಯು ಮಾರ್ಗದಲ್ಲಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಕಚೇರಿಗೆ ಆಗಮಿಸಿರುವ ನೂರಾರು ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಅಲ್ಲದೆ, ಸಂಜಯ್ ಸಿಂಗ್ ಬಿಡುಗಡೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಪ್ರತಿಭಟನಾಕಾರರು ಬಿಜೆಪಿ ಕಚೇರಿಗೆ ತೆರಳುತ್ತಿದ್ದು, ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಅಶ್ರುವಾಯು ಪ್ರಯೋಗ ನಡೆಸಿದ್ದಾರೆ.