News Karnataka Kannada
Monday, April 29 2024
ದೆಹಲಿ

ನನ್ನ ಬಂಧನವಾದರೂ ಸಹ ದೆಹಲಿಯಲ್ಲಿ ಎಎಪಿ ಗೆಲ್ಲಲಿದೆ: ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದೆ.
Photo Credit : News Kannada

ನವದೆಹಲಿ: “ನನ್ನ ಬಂಧನವಾದರೂ ಸಹ ದೆಹಲಿಯ ಲೋಕಸಭಾ ಕ್ಷೇತ್ರಗಳಲ್ಲಿ ಎಎಪಿ ಜಯ ಸಾಧಿಸಲಿದೆ” ಎಂದು ಪಕ್ಷದ ಅಧ್ಯಕ್ಷ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

ನಾನು ಜೈಲು ಸೇರಿದರೂ ಸಹ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೇ ಎಂಬ ಬಗ್ಗೆ ಮನೆಗೆ ತೆರಳಿ ಅಭಿಪ್ರಾಯ ಸಂಗ್ರಹಿಸುವಂತೆ ನಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಪ್ರಚಾರವನ್ನು ಹಳಿ ತಪ್ಪಿಸುವ ಉದ್ದೇಶದಿಂದ ನನ್ನ ಬಂಧನಕ್ಕೆ ಬಿಜೆಪಿ ತಂತ್ರ ರೂಪಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಬೇರೆ ಬೇರೆ ಪ್ರಾದೇಶಿಕ ಪಕ್ಷಗಳ ನಾಯಕರನ್ನೂ ಅವರು ಟಾರ್ಗೆಟ್ ಮಾಡಲಿದ್ದಾರೆ ಎಂದು ಕೇಜ್ರಿವಾಲ್ ಹೇಳಿದರು. ಬಿಜೆಪಿಯ ಸಂಚಿನ ಬಗ್ಗೆ ಜನರಿಗೆ ತಿಳಿಸಿ. ದೆಹಲಿಯ ಒಂದು ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲದಂತೆ ನೋಡಿಕೊಳ್ಳಿ ಎಂದು ಪಕ್ಷದ ಕಾರ್ಯಕರ್ತರಿಗೆ ಅವರು ಕರೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು