News Karnataka Kannada
Friday, April 12 2024
Cricket
ದೆಹಲಿ

ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಸುಪ್ರಿಯಾ ಶ್ರೀನಾಟೆ ವಿರುದ್ಧ ಕ್ರಮಕ್ಕೆ ಆಗ್ರಹ

ಹಿಮಾಚಲ ಪ್ರದೇಶದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಬಾಲಿವುಡ್‌ ನಟಿ ಕಂಗನಾ ರನೌತ್‌ ಅವರ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಸುಪ್ರಿಯಾ ಶ್ರೀನಾಟೆ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ರಾಷ್ಟ್ರೀಯ ಮಹಿಳಾ ಆಯೋಗವು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.
Photo Credit : NewsKarnataka

ನವದೆಹಲಿ: ಹಿಮಾಚಲ ಪ್ರದೇಶದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಬಾಲಿವುಡ್‌ ನಟಿ ಕಂಗನಾ ರನೌತ್‌ ಅವರ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಸುಪ್ರಿಯಾ ಶ್ರೀನಾಟೆ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ರಾಷ್ಟ್ರೀಯ ಮಹಿಳಾ ಆಯೋಗವು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಸದ್ಯ ಸುಪ್ರಿಯಾ ಅವರ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ರನೌತ್‌ ಫೋಟೊ ಸಮೇತ ಮಾಡಿದ್ದ ಪೋಸ್ಟ್‌ನ್ನು ಅಳಿಸಿಹಾಕಲಾಗಿದೆ. ಈ ಕುರಿತು ಪ್ರತಿಕ್ರಯಿಸಿರುವ ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ, ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದ್ದಾರೆ.

ಈ ವಿಚಾರ ಕುರಿತು ಸ್ಪಷ್ಟನೆ ನೀಡಿರುವ ಸುಪ್ರಿಯಾ, ಯಾರೋ ಕಿಡೀಗೇಡಿಗಳು ನನ್ನ ಖಾತೆಯ ಆಕ್ಸೆಸ್‌ ಪಡೆದು ಪೇಸ್‌ಬುಕ್‌ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಕಂಗಾನಾ ಅವರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ. ಇದನ್ನು ಮಾಡಿದವರು ಯಾರು ಎಂದು ತಿಳಿಯಲು ಮುಂದಾಗಿದ್ದೇನೆ ಜೊತೆಗೆ ಖಾತೆ ಕುರಿತು ವರದಿ ಮಾಡಿದ್ದೇನೆ ಎಂದು ಸುಪ್ರಿಯಾ ಹೇಳಿಕೊಂಡಿದ್ದಾರೆ.

ಈ ಪೋಸ್ಟ್‌ ಅವಹೇಳನಕಾರಿಯಾಗಿದೆ ಎಂದು ತಿಳಿದ ತಕ್ಷಣ ನಾನು ಪೋಸ್ಟ್‌ನ್ನು ಅಳಿಸಿದ್ದೇನೆ. ನನ್ನ ಬಗ್ಗೆ ತಿಳಿದಿರುವವರಿಗೆ ಗೊತ್ತಿದೆ ನಾನು ಯಾವುದೇ ಮಹಿಳೆಯ ಕುರಿತು ವೈಯಕ್ತಿಕ ಅಥವಾ ಅಸಭ್ಯ ಕಾಮೆಂಟ್‌ಗಳನ್ನು ಎಂದಿಗೂ ಮಾಡಲಾರೆ ಎಂದು ಹೇಳಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು