Categories: ದೆಹಲಿ

ಫ್ರಾನ್ಸ್‌ ಬಳಿಕ ಯುಎಇಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಫ್ರಾನ್ಸ್​ ಪ್ರವಾಸದಲ್ಲಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ, ಅಲ್ಲಿನ ಸಿಇಒಗಳ ಜತೆಗೆ ಹಾಗೂ ರಾಜತಾಂತ್ರಿಕ ವಿಚಾರಗಳ ಬಗ್ಗೆಯು ಸಭೆಯನ್ನು ನಡೆಸಿದ್ದಾರೆ, ಹಲವು ಒಪ್ಪಂದಗಳಿಗೂ ಸಹಿ ಹಾಕಿದ್ದು, ಫ್ರಾನ್ಸ್​​ ರಾಷ್ಟ್ರೀಯ ದಿನಚಾರಣೆಯಲ್ಲೂ ಭಾಗವಹಿಸಿದ್ದಾರೆ, ಇದರ ಜತೆಗೆ ಪ್ರಧಾನಿ ಮೋದಿ ಅವರಿಗೆ ಫ್ರಾನ್ಸ್​​ನ ಉನ್ನತ ನಾಗರಿಕ ಪ್ರಶಸ್ತಿಯನ್ನು ಕೂಡ ನೀಡಿ ಗೌರವಿಸಲಾಗಿತ್ತು. ಇದೀಗ ಪ್ರಧಾನಿ ಫ್ರಾನ್ಸ್​ ಪ್ರವಾಸ ಮುಗಿಸಿ ಯುಎಇ ಕಡೆಗೆ ಪ್ರಯಾಣ ಬೆಳೆಸಿದ್ದಾರೆ.

ಈ ಬಗ್ಗೆ ವಿದೇಶಾಂಗ ಖಾತೆ ವಕ್ತಾರ ಅರವಿಂದ ಬಾಗ್ಜಿ ಟ್ವೀಟ್‌ ಮಾಡಿದ್ದು, ಅಬುಧಾಬಿಯ ಕ್ರೌನ್ ಪ್ರಿನ್ಸ್, ಶೇಖ್ ಖಲೀದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಿಯವರನ್ನು ಪ್ರೀತಿಯಿಂದ ಬರಮಾಡಿಕೊಂಡರು ಎಂದು ತಿಳಿಸಿದ್ದಾರೆ.

ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹಯಾನ್‌ರೊಂದಿಗೆ ಮಾತುಕತೆ ನಡೆಸಲಿರುವ ಅವರು ಇಂಧನ, ಆಹಾರ ಭದ್ರತೆ ಮತ್ತು ರಕ್ಷಣೆಯ ವಿಷಯಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆ ಇದೆ. ಜತೆಗೆ ಕೆಲವು ಮಹತ್ವದ ಒಪ್ಪಂದಗಳಿಗೆ ಉಭಯ ದೇಶದ ನಾಯಕರು ಸಹಿ ಹಾಕಲಿದ್ದಾರೆ.

Ashika S

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

6 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

6 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

6 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

7 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

7 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

7 hours ago