ದೆಹಲಿ: ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಸೋನಿಯಾ ಗಾಂಧಿ ಜೈಪುರಕ್ಕೆ ಸ್ಥಳಾಂತರಗೊಂಡಿದ್ದಾರೆ. ದೆಹಲಿಯಲ್ಲಿ ವಾಯುಗುಣಮಟ್ಟ ದಿನದಿಂದ ದಿನಕ್ಕೆ ಕಳಪೆಯಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಸೋನಿಯಾ ಜೈಪುರಕ್ಕೆ ಶಿಫ್ಟ್ ಆಗಿದ್ದಾರೆ.
ಆದರೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸೋನಿಯಾ ಗಾಂಧಿ ಯಾವುದೇ ಚುನಾವಣಾ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಿಲ್ಲ. ದೆಹಲಿಯಲ್ಲಿ ಮಾಲಿನ್ಯದಿಂದ ಉಂಟಾಗುವ ವಿಷಪೂರಿತ ಗಾಳಿಯನ್ನು ತಪ್ಪಿಸಲು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಈಗ ಜೈಪುರದಲ್ಲಿ ಕೆಲವು ದಿನಗಳ ಕಾಲ ತಂಗಲಿದ್ದಾರೆ.