Categories: ದೆಹಲಿ

ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಭಾರತದಾದ್ಯಂತ ಜಾರಿ: ಅಮಿತ್​​ ಶಾ

ದೆಹಲಿ: ಈ ಬಾರಿ ಎನ್‌ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್​​ ಶಾ ಹೇಳಿದ್ದಾರೆ.

ಇಂದು ಇಟಿ ನೌ ಗ್ಲೋಬಲ್ ಬಿಸಿನೆಸ್ ಶೃಂಗಸಭೆ 2024 ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು. ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ 370 ಹಾಗೂ ಎನ್​​ಡಿಎ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ. ಈ ಚುನಾವಣಾ ಫಲಿತಾಂಶದ ಬಗ್ಗೆ ಯಾವುದೇ ಸಸ್ಪೆನ್ಸ್ ಇಲ್ಲ ಎಂದು ಹೇಳಿದರು.

ನಮ್ಮ ಸರ್ಕಾರ ಜಮ್ಮು-ಕಾಶ್ಮೀರದಲ್ಲಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದೆ. ಆದ್ದರಿಂದ ದೇಶದ ಜನರು ಬಿಜೆಪಿಗೆ 370 ಸ್ಥಾನಗಳನ್ನು ಮತ್ತು ಎನ್‌ಡಿಎಗೆ 400ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಿ ಆಶೀರ್ವದಿಸುತ್ತಾರೆ ಎಂದರು.

ಈ ಸಭೆಯಲ್ಲಿ ಸಿಎಎ ಬಗ್ಗೆ ಮಾತನಾಡಿದ ಅಮಿತ್ ಶಾ, ಪೌರತ್ವ (ತಿದ್ದುಪಡಿ) ಕಾಯಿದೆ (ಸಿಎಎ) 2019ರಲ್ಲಿ ಜಾರಿಗೊಳಿಸಲಾದ ಕಾನೂನು, ಈ ಕಾನೂನಿಗೆ ಸಂಬಂಧಿಸಿದಂತೆ ನಿಯಮಗಳನ್ನು ಹೊರಡಿಸಲಾಗುವುದು, ಲೋಕಸಭೆ ಚುನಾವಣೆಗೂ ಮುನ್ನ ಭಾರತದಾದ್ಯಂತ ಜಾರಿಗೆ ತರಲಾಗುವುದು. ಈ ಕಾನೂನಿನ ಬಗ್ಗೆ ನಮ್ಮ ಮುಸ್ಲಿಂ ಸಹೋದರರಿಗೆ ತಪ್ಪು ಮಾಹಿತಿ ನೀಡಲಾಗುತ್ತಿದೆ. ಸಿಎಎ ಕೇವಲ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಕಿರುಕುಳವನ್ನು ಎದುರಿಸಿ ಭಾರತಕ್ಕೆ ಬಂದವರಿಗೆ ಪೌರತ್ವವನ್ನು ನೀಡುವ ಉದ್ದೇಶದಿಂದ ಜಾರಿಗೆ ತರಲಾಗುತ್ತಿದೆ. ಈ ಕಾನೂನಿನ ಮೂಲಕ ಯಾರೊಬ್ಬರ ಪೌರತ್ವವನ್ನು ಕಸಿದುಕೊಳ್ಳುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Gayathri SG

Recent Posts

ಮೇ 18ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ

ಮೇ 18ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಐದು ದಿನಗಳ…

5 mins ago

ಹರೇಕಳದಲ್ಲಿ ಹಾಜಬ್ಬರ ಕನಸಿನ ಪದವಿಪೂರ್ವ ಶಿಕ್ಷಣ ಆರಂಭ

ತಾನು ಅನಕ್ಷರಸ್ಥನಾದರೂ ತನ್ನ ಊರಿನ ಮಕ್ಕಳು ವಿದ್ಯೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದೊಂದಿಗೆ ಹರೇಕಳ ಹಾಜಬ್ಬರು ಕಿತ್ತಲೆ ಹಣ್ಣು ಮಾರಾಟ ಮಾಡಿ…

11 mins ago

ಪೆನ್‌ ಡ್ರೈವ್‌ ಪ್ರಕರಣ: ‘ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು ಅವರೇ ನುಂಗಿಕೊಳ್ಳಲಿ’

ಪೆನ್‌ ಡ್ರೈವ್‌ ಪ್ರಕರಣದಲ್ಲಿ ಕುಮಾರಣ್ಣ ಯಾವ ತಿಮಿಂಗಿಲವನ್ನಾದರೂ ಹಿಡಿದು ಅವರೇ ನುಂಗಿಕೊಳ್ಳಲಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

26 mins ago

ಅಮೆರಿಕದ ವೈಟ್ ಹೌಸ್ ನಲ್ಲಿ ಮೊಳಗಿದ ಸಾರೆ ಜಹಾನ್‌ ಸೇ ಅಚ್ಚಾ

ಅಮೆರಿಕದ ವೈಟ್ ಹೌಸ್ ನಲ್ಲಿ ಆಯೋಜಿಸಲಾಗಿದ್ದ ಏಷಿಯನ್‌ ಅಮೆರಿಕನ್‌, ಸ್ಥಳೀಯ ಹವಾಯಿಯನ್‌ ಮತ್ತು ಪೆಸಿಫಿಕ್‌ ಐಲ್ಯಾಂಡರ್‌ ಪಾರಂಪರ್ಯ ಮಾಸಾಚರಣೆ ಕಾರ್ಯಕ್ರಮದಲ್ಲಿ…

42 mins ago

ವಿಮಾನದಲ್ಲಿ ಪ್ರಯಾಣಿಕರ ಬ್ಯಾಗ್​ನಿಂದ ಬೆಲೆಬಾಳುವ ವಸ್ತು ಕಳ್ಳತನ: ಆರೋಪಿಗಳು ವಶಕ್ಕೆ

ವಿಮಾನಗಳಲ್ಲಿ ಪ್ರಯಾಣಿಸುತ್ತಿದ್ದ ಸಹ ಪ್ರಯಾಣಿಕರ ಕೈ ಚೀಲಗಳಿಂದ ಚಿನ್ನಾಭರಣ ಇನ್ನಿತರ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡುತ್ತಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು…

44 mins ago

ಮಕ್ಕಳ ಗೌಪ್ಯತೆ ಕಾಪಾಡಿದ್ದಕ್ಕೆ ಪಾಪ್ಸ್‌ಗೆ ದುಬಾರಿ ಗಿಫ್ಟ್ ಹ್ಯಾಂಪರ್ ಕೊಟ್ಟ ವಿರುಷ್ಕಾ

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ತಮ್ಮ ಮಕ್ಕಳ ಗೌಪ್ಯತೆ ಕಾಪಾಡಿಕೊಂಡು ಬಂದಿರುವುದರ ಗೌರವಾರ್ಥ ಪಾಪಾರಾಜಿಗಳಿಗೆ ದುಬಾರಿ ಉಡುಗೊರೆ…

1 hour ago