ನವದೆಹಲಿ: ತೃಣಮೂಲ ಕಾಂಗ್ರೆಸ್ನ ಮಾಜಿ ಸಂಸದೆ ಮಹುವಾ ಮೊಯಿತ್ರಾಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.
ಲೋಕ ಸಭೆಯಿಂದ ಅಮಾನತುಗೊಂಡ ಬೆನ್ನಲ್ಲೆ, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘನೆ ಪ್ರಕರಣದಲ್ಲಿ ಮುಂದಿನ ವಾರ ವಿಚಾರಣೆಗೆ ಹಾಜರಾಗುವಂತೆ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾಗೆ ಇಡಿ ಸಮನ್ಸ್ ನೀಡಿದೆ.
ಫೆಬ್ರವರಿ 19 ರಂದು ದೆಹಲಿಯ ಕೇಂದ್ರ ತನಿಖಾ ಸಂಸ್ಥೆಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.