Categories: ದೆಹಲಿ

ಭಾರತೀಯ ಕಂಪನಿಯಿಂದಲೂ ಆ್ಯಪಲ್ ಐಫೋನ್ ತಯಾರಿಕೆ

ನವದೆಹಲಿ: ದೇಶದಲ್ಲಿ ಉಪ್ಪಿನಿಂದ ಹಿಡಿದು ಚಹಾ ಪುಡಿಯವರೆಗೆ ಕಬ್ಬಿಣದಿಂದ ತೊಡಗಿ ಮಾಹಿತಿ ತಂತ್ರಜ್ಞಾನದವರೆಗೆ ಎಲ್ಲ ಕ್ಷೇತ್ರದಲ್ಲಿಯೂ ಟಾಟಾ ಕಂಪನಿಯ ಉತ್ಪನ್ನಗಳಿವೆ. ಇದೀಗ ಟಾಟಾ ಗ್ರೂಪ್ ಸಂಸ್ಥೆ ಭಾರತದಲ್ಲಿ ಆ್ಯಪಲ್​ನ ಐಫೋನ್​ಗಳನ್ನು ತಯಾರಿಸುವುದಾಗಿ ಹೇಳಿಕೊಂಡಿದೆ.

ವಿಸ್ಟ್ರಾನ್ ಇನ್ಫೋಕಾಮ್ ಸಂಸ್ಥೆಯನ್ನು ಟಾಟಾಗೆ ಮಾರುವುದಕ್ಕೆ ಅದರ ಮಾತೃ ಸಂಸ್ಥೆ ಒಪ್ಪಿಗೆ ನೀಡಿದೆ. ಈ ವಿಚಾರವನ್ನು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಎಕ್ಸ್ ಖಾತೆ ಮೂಲಕ ತಿಳಿಸಿದ್ದಾರೆ. ವಿಸ್ಟ್ರಾನ್ ಕಾರ್ಪೊರೇಶನ್ ಸಂಸ್ಥೆ ಈ ನಿಟ್ಟಿನಲ್ಲಿ ಅಧಿಕೃತ ಘೋಷಣೆ ಮಾಡಿರುವ ಪತ್ರವನ್ನೂ ಅವರು ತಮ್ಮ ಟ್ವೀಟ್ ಜೊತೆಗೆ ಲಗತ್ತಿಸಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಪಿಎಲ್​ಐ ಸ್ಕೀಮ್​ನಿಂದಾಗಿ ಸ್ಮಾರ್ಟ್​ಫೋನ್ ಮ್ಯಾನುಫ್ಯಾಕ್ಚರಿಂಗ್ ಮತ್ತು ರಫ್ತಿನಲ್ಲಿ ಭಾರತ ಪ್ರಮುಖ ತಾಣವಾಗಿದೆ. ಎರಡೂವರೆ ವರ್ಷದೊಳಗೆಯೇ ಟಾಟಾ ಕಂಪನಿ ಭಾರತದಲ್ಲಿ ಐಫೋನ್​ಗಳ ತಯಾರಿಕೆಯನ್ನು ಈಗ ಆರಂಭಿಸುತ್ತಿದೆ. ವಿಸ್ಟ್ರಾನ್ ಆಪರೇಷನ್ಸ್ ಅನ್ನು ಸ್ವಾಧೀನಪಡಿಸಿಕೊಂಡಿದ್ದಕ್ಕೆ ಟಾಟಾ ಟೀಮ್​ಗೆ ಧನ್ಯವಾದಗಳು ಎಂದು ರಾಜೀವ್ ಚಂದ್ರಶೇಖರ್ ತಮ್ಮ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

Ashika S

Recent Posts

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

7 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

15 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

16 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

31 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

36 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

49 mins ago