ನವದೆಹಲಿ: ಉನ್ನತ ಮಟ್ಟದ ತನಿಖೆಯ ಬಳಿಕ ರಾಷ್ಟ್ರೀಯ ಭದ್ರತಾ ನಿಯಮಗಳನ್ನು ಉಲ್ಲಂಘನೆ ಮಾಡಿರುವ ವಿಚಾರದಲ್ಲಿ ತಪ್ಪಿತಸ್ಥರೆಂದು ಕಂಡು ಬಂದ ಕಾರಣಕ್ಕೆ ಸ್ಟ್ರಾಟೆಜಿಕ್ ಫೋರ್ಸಸ್ ಕಮಾಂಡ್ (ಎಸ್ಎಫ್ಸಿ) ನಲ್ಲಿ ನೇಮಕಗೊಂಡಿದ್ದ ಭಾರತೀಯ ಸೇನಾ ಮೇಜರ್ಅನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಸೇವೆಯಿಂದ ವಜಾ ಮಾಡಿದ್ದಾರೆ ಎಂದು ರಕ್ಷಣಾ ಮತ್ತು ಭದ್ರತಾ ಸಂಸ್ಥೆಯ ಮೂಲಗಳು ಮಂಗಳವಾರ ತಿಳಿಸಿವೆ.
2022 ರ ಮಾರ್ಚ್ನಲ್ಲಿ ಮೇಜರ್ನ ಚಟುವಟಿಕೆಗಳ ಬಗ್ಗೆ ಸೇನೆಯು ತನಿಖೆಯನ್ನು ಪ್ರಾರಂಭಿಸಿತು, ಅವರು ಸೂಕ್ಷ್ಮ ಮಾಹಿತಿಯನ್ನು ಹೊಂದಿರುವುದು ಮತ್ತು ಹಂಚಿಕೊಳ್ಳುವುದು ಸೇರಿದಂತೆ ಅನುಮಾನಾಸ್ಪದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಕಂಡು ಹಿಡಿದಿದ್ದರು ಎಂದು ತಿಳಿಸಿದ್ದಾರೆ.
ಮೂರು ಸೇನಾ ಪಡೆಗಳ ಸರ್ವೋಚ್ಚ ಕಮಾಂಡರ್ ಆಗಿರುವ ರಾಷ್ಟ್ರಪತಿ, ಸೇನಾ ಕಾಯಿದೆ, 1950 ರ ಅಡಿಯಲ್ಲಿ ತಮ್ಮ ಅಧಿಕಾರವನ್ನು ಚಲಾವಣೆ ಮಾಡಿದ್ದು, ಒಂದು ವಾರದ ಹಿಂದೆ ಮೇಜರ್ನ ಸೇವೆಯನ್ನು ಕೊನೆಗೊಳಿಸುವ ಆದೇಶಕ್ಕೆ ಸಹಿ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸೆಪ್ಟೆಂಬರ್ನ ಮಧ್ಯಭಾಗದಲ್ಲಿ ಮೇಜರ್ಅನ್ನು ಸೇವೆಯಿಂದ ವಜಾ ಮಾಡುವ ಆದೇಶವನ್ನು ನೀಡಲಾಗಿತ್ತು. ರಾಷ್ಟ್ರಪತಿಗಳ ಅನುಮೋದನೆಯ ಬಳಿಕ ಇದನ್ನು ಜಾರಿ ಮಾಡಲಾಗಿದೆ.