Categories: ದೆಹಲಿ

ದುರಹಂಕಾರ ಯಾವತ್ತೂ ಅಪಾಯಕಾರಿ: ಮೋದಿಗೆ ಖರ್ಗೆ ಟಾಂಗ್‌

ಹೊಸದಿಲ್ಲಿ: ಕಾಂಗ್ರೆಸ್‌ ಪಕ್ಷದಿಂದಾಗಿ ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿದಿದೆ. ಇದರಿಂದಾಗಿಯೇ ಇಂದು ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಂತಹವರು ಪ್ರಧಾನಿ ಮತ್ತು ಗೃಹ ಸಚಿವ ಸ್ಥಾನವನ್ನು ಅಲಂಕರಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಹೇಳಿದರು.

ಇಲ್ಲಿನ ಟಾಲ್ಕಟೋರಾ ಕ್ರೀಡಾಂಗಣದಲ್ಲಿ ಮಹಿಳಾ ಕಾಂಗ್ರೆಸ್‌ನ ಎರಡು ದಿನಗಳ ರಾಷ್ಟ್ರೀಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ಮಹಿಳೆಯರ ಸಬಲೀಕರಣದ ಉದ್ದೇಶದಿಂದ ದೆಹಲಿಯಲ್ಲಿ ಇಂತಹ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅದರ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ನೆಟ್ಟಾ ಡಿಸೋಜಾ ಅವರನ್ನು ಅಭಿನಂದಿಸಿದರು.

ರಾಹುಲ್ ಗಾಂಧಿ ‘ಭಾರತ್ ಜೋಡೋ’ (ಭಾರತವನ್ನು ಒಗ್ಗೂಡಿಸುವ) ಬಗ್ಗೆ ಮಾತನಾಡುತ್ತಾರೆ. ಆದರೆ ಮೋದಿ ‘ಭಾರತ್ ತೋಡೋ’ (ಭಾರತವನ್ನು ವಿಭಜಿಸು) ಎನ್ನುತ್ತಾರೆ. ಮಣಿಪುರದಲ್ಲಿ ಮೂರುತಿಂಗಳಿನಿಂದ ಹಿಂಸಾಚಾರ ನಡೆಯುತ್ತಿದ್ದರೂ ಕೂಡ ಪ್ರಧಾನಿ ಅಲ್ಲಿಗೆ ಭೇಟಿ ನೀಡಿಲ್ಲ ಎಂದರು.

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ತಮ್ಮನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿದ್ದನ್ನು ಉಲ್ಲೇಖಿಸಿದ ಖರ್ಗೆ, 1969 ರಲ್ಲಿ ನಾನು ಬ್ಲಾಕ್ ಅಧ್ಯಕ್ಷನಾಗಿದ್ದೆ. ಎರಡು ವರ್ಷಗಳಲ್ಲಿ ನನ್ನನ್ನು ಇಂದಿರಾಗಾಂಧಿ ಶಾಸಕನನ್ನಾಗಿ ಮಾಡಿದರು. ಬಳಿಕ 50 ವರ್ಷ ಒಂದೇ ಒಂದು ಚುನಾವಣೆಯಲ್ಲಿ ಸೋತಿರಲಿಲ್ಲ. 2019ರ ಲೋಕಸಭೆ ಚುನಾವಣೆಯಲ್ಲಿ ಸೋತಾಗ ಸೋನಿಯಾ ಗಾಂಧಿ ಅವರು ನನ್ನನ್ನು ರಾಜ್ಯಸಭೆಗೆ ಕಳುಹಿಸಿದ್ದರು ಎಂದರು.

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ಕೆಲ ದಿನಗಳ ಹಿಂದೆ ಅವರು (ಮೋದಿ) ಸಂಸತ್ತಿನಲ್ಲಿ ಭಾಷಣ ಮಾಡಿದರು. ಆದರೆ ಅವರಿಗೆ ಅಲ್ಲಿ (ಪಂಡಿತ್ ಜವಾಹರಲಾಲ್) ನೆಹರು, ಗಾಂಧೀಜಿ, ಸರ್ದಾರ್ ವಲ್ಲಭಭಾಯಿ ಪಟೇಲ್, ಅಂಬೇಡ್ಕರ್‌ ಅವರ ನೆನಪಾಗಲಿಲ್ಲ. ಎಲ್ಲವನ್ನು ಮೋದಿಯೇ ಮಾಡಿದ್ದು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಾರೆ. ಒಬ್ಬ ವ್ಯಕ್ತಿಯ ದುರಹಂಕಾರ ಯಾವತ್ತೂ ಅಪಾಯಕಾರಿ ಎಂದರು.

Ashika S

Recent Posts

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

14 mins ago

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

29 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

37 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

52 mins ago

ಗುಜರಾತ್ ತಂಡದ ನಾಯಕ ಶುಭಮನ್ ಗಿಲ್​ಗೆ ಮತ್ತೆ 24 ಲಕ್ಷ ರೂ. ದಂಡ

ಶುಕ್ರವಾರ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 35 ರನ್‌ಗಳಿಂದ ಜಯಗಳಿಸಿದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭಮನ್…

52 mins ago

ಟಿ20 ವಿಶ್ವಕಪ್​ಗೆ ಮುನ್ನ ರಿಷಭ್​ ಪಂತ್​​ಗೆ ನಿಷೇಧ, 30 ಲಕ್ಷ ರೂ. ದಂಡ

17ನೇ ಆವೃತ್ತಿಯ ಐಪಿಎಲ್​ನ 62ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ನಡುವೆ ಹೈವೋಲ್ಟೇಜ್ ಪಂದ್ಯ…

1 hour ago