Categories: ದೆಹಲಿ

ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಅರವಿಂದರ್ ಸಿಂಗ್ ಲವ್ಲಿ

ನವದೆಹಲಿ: ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ್ದ ಅರವಿಂದರ್ ಸಿಂಗ್ ಲವ್ಲಿ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಆಮ್ ಆದ್ಮಿ ಪಕ್ಷದೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿರುವುದನ್ನು ಖಂಡಿಸಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಅರವಿಂದರ್ ಸಿಂಗ್ ಲವ್ಲಿ ಜೊತೆ ಮಾಜಿ ಶಾಸಕರಾದ ರಾಜ್ ಕುಮಾರ್ ಚೌಹಾಣ್, ನಸೀಬ್ ಸಿಂಗ್, ನೀರಜ್ ಬಸೋಯಾ ಮತ್ತು ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಮಿತ್ ಮಲಿಕ್ ಕೂಡ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು ಮತ್ತು ದುರುದ್ದೇಶಪೂರಿತ ಭ್ರಷ್ಟಾಚಾರ ಆರೋಪಗಳನ್ನು ಹೊರಿಸುವ ಏಕೈಕ ಆಧಾರದ ಮೇಲೆ ರಚಿಸಲಾದ ಪಕ್ಷದೊಂದಿಗಿನ ಮೈತ್ರಿಗೆ ದೆಹಲಿ ಕಾಂಗ್ರೆಸ್ ಘಟಕದ ವಿರೋಧವಿತ್ತು. ಅದರ ಹೊರತಾಗಿಯೂ, ಪಕ್ಷವು ದೆಹಲಿಯಲ್ಲಿ ಆಪ್ ಜೊತೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರವನ್ನು ಮಾಡಿದ್ದಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದರು.

Ashika S

Recent Posts

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

3 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

45 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

48 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

1 hour ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

2 hours ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 hours ago