News Karnataka Kannada
Friday, May 03 2024
ದೆಹಲಿ

ರಾಹುಲ್‌ ಕಾಂಗ್ರೆಸ್‌ನ ಪ್ರಧಾನಿ ಅಭ್ಯರ್ಥಿ: ಅಶೋಕ್ ಗೆಹ್ಲೋಟ್‌ ಘೋಷಣೆ

rahul gandi-ashok-gehlot
Photo Credit : News Kannada

ನವದೆಹಲಿ: 2024ರ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕಾಂಗ್ರೆಸ್‌ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗೆಹ್ಲೋಟ್‌, ‘ರಾಹುಲ್‌ ಗಾಂಧಿಯನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಮಾಡಲು ಕಾಂಗ್ರೆಸ್‌ ನಿರ್ಧರಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಹಂಕಾರಿಯಾಗಬಾರದು. 2014ರಲ್ಲಿ ಬಿಜೆಪಿ ಕೇವಲ ಶೇ.31ರಷ್ಟುಮತಗಳನ್ನು ಪಡೆದು ಅಧಿಕಾರಕ್ಕೆ ಬಂದಿದೆ. ಉಳಿದ ಶೇ.69ರಷ್ಟು ಮತಗಳು ಬಿಜೆಪಿಯ ವಿರುದ್ಧವಾಗಿವೆ’ ಎಂದಿದ್ದಾರೆ.

ಈ ವೇಳೆ 26 ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಬಗ್ಗೆ ಮಾತನಾಡಿದ ಅವರು ‘ಕಳೆದ ತಿಂಗಳು ಬೆಂಗಳೂರಿನಲ್ಲಿ ‘ಇಂಡಿಯಾ’ ಸಭೆ ನಡೆಸಿದಾಗ ಎನ್‌ಡಿಎ ಭಯಗೊಂಡಿತ್ತು. 2024ರಲ್ಲಿ ಎನ್‌ಡಿಎ  ಶೇ.50ರಷ್ಟು ಮತಗಳೊಂದಿಗೆ ಮರಳಿ ಅಧಿಕಾರಕ್ಕೆ ಬರಲು ಯೋಜಿಸುತ್ತಿದೆ ಎನ್ನಲಾಗುತ್ತಿದೆ. ಆದರೆ ಅದನ್ನು ಸಾಧಿಸಲು ಮೋದಿ ಅವರಿಗೆ ಎಂದಿಗೂ ಸಾಧ್ಯವಿಲ್ಲ. 2024ರ ಚುನಾವಣೆಯೇ ಪ್ರಧಾನಿ ಯಾರೆಂಬುದನ್ನು ನಿರ್ಧರಿಸುತ್ತದೆ’ ಎಂದರು.

ಇನ್ನು ವಾರಾಣಾಸಿಯಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸಲು ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯು ಉತ್ಸುಕವಾಗಿದೆ. ಈ ಬಗ್ಗೆ ಶೀಘ್ರದಲ್ಲೇ ವರಿಷ್ಠರಿಗೆ ಪ್ರಸ್ತಾವನೆ ಕಳುಹಿಸಲಿದೆ ಎಂದು ಪಕ್ಷದ ನೂತನ ರಾಜ್ಯಾಧ್ಯಕ್ಷ ಅಜಯ್ ರೈ ಅವರು ಆ.27ರಂದು ತಿಳಿಸಿದ್ದರು.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು