News Karnataka Kannada
Tuesday, April 30 2024
ದೆಹಲಿ

ಇಂದು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ

Assembly election results in four states today
Photo Credit : News Kannada

ನವದೆಹಲಿ: ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಸೇರಿ ಇಂದು ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಹೊರ ಬೀಳಲಿದ್ದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಪೊಲೀಸ್ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದೆ.

ಇಂದು ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ. ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್,​​​ ಪುತ್ರ ಕೆ.ಟಿ.ರಾಮ್​ರಾವ್, ಕಾಂಗ್ರೆಸ್​​ನ ರೇವಂತ್​​ ರೆಡ್ಡಿ, ಬಿಜೆಪಿ ಸಂಜಯ್ ಕುಮಾರ್ ಸೇರಿದಂತೆ 119 ಕ್ಷೇತ್ರಗಳ 2,290 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

4 ರಾಜ್ಯಗಳ ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಛತ್ತೀಸ್​ಗಢ ರಾಜ್ಯದಲ್ಲಿ ಮಾತ್ರ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಮಧ್ಯಪ್ರದೇಶದಲ್ಲಿ ನ.17ರಂದು 230 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ರಾಜಸ್ಥಾನದಲ್ಲಿ ನ.25ರಂದು 200 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ತೆಲಂಗಾಣದಲ್ಲಿ ನ.30ರಂದು 119 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಛತ್ತೀಸ್​ಗಢದಲ್ಲಿ ನ.7, ನ.17ರಂದು 90 ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಮಿಜೋರಾಂನಲ್ಲಿ ನ.7ರಂದು 40 ಕ್ಷೇತ್ರಗಳಿಗೆ ಮತದಾನ ನಡೆದಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು