News Karnataka Kannada
Monday, April 29 2024
ದೆಹಲಿ

6 ತಿಂಗಳಲ್ಲಿ ಸ್ವಯಂಚಾಲಿತ ಟೋಲ್‌ ಸಂಗ್ರಹ ವ್ಯವಸ್ಥೆ- ಸಚಿವ ನಿತಿನ್‌ ಗಡ್ಕರಿ

Automatic toll collection system in 6 months: Nitin Gadkari
Photo Credit : By Author

ನವದೆಹಲಿ: ದೇಶದಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಹೆದ್ದಾರಿ ಟೋಲ್‌ಗಳನ್ನು ಬದಲಿಸಿ ಇನ್ನು ಆರು ತಿಂಗಳಲ್ಲಿ ಹೊಸ ತಂತ್ರಜ್ಞಾನ ಒಳಗೊಂಡ ಜಿಪಿಎಸ್‌ ಆಧಾರಿತ ಟೋಲ್‌ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

ಈ ಹೊಸ ವ್ಯವಸ್ಥೆಯು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಹಾಗೂ ಹೆದ್ದಾರಿಗಳಲ್ಲಿ ಪ್ರಯಾಣಿಸಿದ ನಿಖರ ದೂರಕ್ಕೆ ಶುಲ್ಕವನ್ನು ವಿಧಿಸುವ ಗುರಿ ಹೊಂದಿದೆ ಎಂದೂ ಅವರು ತಿಳಿಸಿದ್ದಾರೆ.

ಸಿಐಐ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್‌ಎಚ್‌ಎಐ) ‌ನಿಂದ ಸಂಗ್ರಹವಾಗುವ ಆದಾಯವು 1, 40 ಸಾವಿರ ಕೋಟಿಯಷ್ಟು ಇದ್ದು, ಇನ್ನು 2-3 ವರ್ಷಗಳಲ್ಲಿ ಈ ಪ್ರಮಾಣವು 11.40 ಲಕ್ಷ ಕೋಟಿಗಳಿಗೆ ಏರಿಕೆಯಾಗಲಿದೆ ಎಂದು ಗಡ್ಕರಿ ಹೇಳಿದ್ದಾರೆ.

ಕೇಂದ್ರ ಶುದ್ದಾರಿ ಮತ್ತು ಸಾರಿಗೆ ಸಚಿವಾಲಯವು, ವಾಹನಗಳನ್ನು ನಿಲ್ಲಿಸದ ಸ್ವಯಂಚಾಲಿತ ಟೋಲ್ ಸಂಗ್ರಹವನ್ನು ಸಕ್ರಿಯಗೊಳಿಸಲು, ವಾಹನಗಳ ನಂಬರ್ ಪ್ಲೇಟ್‌ಗಳನ್ನು ಸ್ವಯಂಚಾಲಿ ಕವಾಗಿ (ಆಟೋಮ್ಯಾಟಿಕ್) ಗುರುತಿಸುವ ಪ್ರಾಯೋಗಿಕ ಯೋಜನೆಯನ್ನು ತರಲಿದೆ ಎಂದು ತಿಳಿಸಿದ್ದಾರೆ.

2018-19ರಲ್ಲಿ ಟೋಲ್ ಪ್ಲಾಜಾಗಳಲ್ಲಿ ವಾಹನಗಳು ಕಾಯುವ ಸರಾಸರಿ ಅವಧಿಯು 8 ನಿಮಿಷಗಳಾಗಿತ್ತು. 2020 ಪರಿಚಯಿಸಿದ ಬಳಿಕ ವಾಹನಗಳು ಕಾಯುವ ಸರಾಸರಿ ಅವಧಿಯು 47 ಸೆಕೆಂಡ್‌ಗಳಿಗೆ ಇಳಿದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು