Categories: ದೆಹಲಿ

ಭಾರತದಿಂದ ಅಕ್ಕಿ ರಫ್ತಿಗೆ ನಿಷೇಧ: ಗರಿಷ್ಠ ದರಕ್ಕೆ ಏರಿಕೆ

ನವದೆಹಲಿ: ಜಗತ್ತಿನ ಪ್ರಮುಖ ಅಕ್ಕಿ ರಫ್ತುದಾರ ಭಾರತವು ಅಕ್ಕಿಯ ಮೇಲಿನ ರಫ್ತು ನಿಷೇಧಿಸಿದ ನಂತರ ಜಾಗತಿಕ ಮಾರುಕಟ್ಟೆಯಲ್ಲಿ ಅಕ್ಕಿ ದರ ಭಾರಿ ಏರಿಕೆ ಕಂಡಿದೆ. ಜಾಗತಿಕ ಅಕ್ಕಿ ಬೆಲೆ ಆಗಸ್ಟ್‌ನಲ್ಲಿ 15 ವರ್ಷಗಳ ಗರಿಷ್ಠ ಮಟ್ಟವನ್ನು ತಲುಪಿದೆ ಎಂದು ಆಹಾರ ಮತ್ತು ಕೃಷಿ ಸಂಸ್ಥೆ ಇಂದು(ಸೆ.08) ತಿಳಿಸಿದೆ.

ಜಾಗತಿಕ ಆಹಾರ ಬೆಲೆಗಳು ಭಾರಿ ಏರಿಕೆಯಾಗುತ್ತಿದ್ದು, ಹಿಂದಿನ ತಿಂಗಳಿಗೆ ಹೋಲಿಸಿದರೆ ಅಕ್ಕಿಯ ದರವು 9.8 ಪ್ರತಿಶತದಷ್ಟು ಏರಿಕೆಯಾಗಿದೆ. ಭಾರತದಿಂದ ಇಂಡಿಕಾ ಬಿಳಿ ಅಕ್ಕಿ ರಫ್ತು ಮೇಲಿನ ನಿಷೇಧದ ನಂತರದ ವ್ಯಾಪಾರದ ಅಡೆತಡೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಎಫ್‌ಎಒ ಮಾಸಿಕ ವರದಿಯಲ್ಲಿ ತಿಳಿಸಿದೆ.

ಭಾರತವು ಜುಲೈನಲ್ಲಿ ಬಾಸ್ಮತಿ ಅಲ್ಲದ ಬಿಳಿ ಅಕ್ಕಿಯ ರಫ್ತಿನ ಮೇಲೆ ನಿಷೇಧವನ್ನು ಘೋಷಿಸಿತು. ಈ ಕ್ರಮವು ಸಮರ್ಪಕ ಲಭ್ಯತೆಯನ್ನು ಖಚಿತಪಡಿಸುತ್ತದೆ ಮತ್ತು ದೇಶೀಯ ಮಾರುಕಟ್ಟೆಯಲ್ಲಿನ ಬೆಲೆಗಳ ಏರಿಕೆಯನ್ನು ಕಡಿಮೆ ಮಾಡುತ್ತದೆ ಎಂದು ಗ್ರಾಹಕ ವ್ಯವಹಾರಗಳು ಮತ್ತು ಆಹಾರ ಸಚಿವಾಲಯವು ಆ ಸಮಯದಲ್ಲಿ ಹೇಳಿದೆ.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

5 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

5 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

6 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

6 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

6 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

6 hours ago