News Karnataka Kannada
Thursday, May 02 2024
ದೆಹಲಿ

ಜುಲೈ 20 ರಿಂದ ಸಂಸತ್ತಿನ ಮುಂಗಾರು ಅಧಿವೇಶನ

Beginning in old Parliament building, ending in new building: Session from July 20
Photo Credit : News Kannada

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 20 ರಿಂದ ಆರಂಭವಾಗಿ ಆಗಸ್ಟ್ 11 ರಂದು ಮುಕ್ತಾಯಗೊಳ್ಳಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಶನಿವಾರ ಹೇಳಿದ್ದಾರೆ. ಅಲ್ಲದೆ ರಚನಾತ್ಮಕ ಕೊಡುಗೆ ನೀಡುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು ಸಂಸತ್ತಿನ ಮುಂಗಾರು ಅಧಿವೇಶನ, 2023 ಜುಲೈ 20 ರಿಂದ ಪ್ರಾರಂಭವಾಗುತ್ತದೆ ಮತ್ತು ಆಗಸ್ಟ್ 11 ರವರೆಗೆ ಮುಂದುವರಿಯುತ್ತದೆ. ಶಾಸಕಾಂಗ ವ್ಯವಹಾರ ಮತ್ತು ಇತರ ವಿಷಯಗಳ ಬಗ್ಗೆ ಉತ್ಪಾದಕ ಚರ್ಚೆಗಳಿಗೆ ಕೊಡುಗೆ ನೀಡುವಂತೆ ಎಲ್ಲಾ ಪಕ್ಷಗಳನ್ನು ಒತ್ತಾಯಿಸಿದ್ದಾರೆ. ಮುಂಗಾರು ಅಧಿವೇಶನವು 17 ಅಧಿವೇಶನಗಳನ್ನು ಹೊಂದಿರುತ್ತದೆ ಎಂದು ಸಂಸದೀಯ ವ್ಯವಹಾರಗಳ ಸಚಿವರು ಸ್ಪಷ್ಟಪಡಿಸಿದ್ದಾರೆ.

“23 ದಿನಗಳ ಕಾಲ ನಡೆಯುವ ಈ ಅಧಿವೇಶನದಲ್ಲಿ ಒಟ್ಟು 17 ಅಧಿವೇಶನಗಳು ನಡೆಯಲಿವೆ ಎಂದು ಜೋಶಿ ಹೇಳಿದರು. ಮಹತ್ವದ ಮುಂಗಾರು ಅಧಿವೇಶನವು ಹಳೆಯ ಸಂಸತ್ ಕಟ್ಟಡದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ. ಆದರೆ ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ ಹೊಸ ಸಂಸತ್ತಿನ ಕಟ್ಟಡದಲ್ಲಿ ಅಧಿವೇಶನ ಮುಕ್ತಾಯಗೊಳ್ಳಬಹುದು ಎಂದು ಮೂಲಗಳು ಸೂಚಿಸಿವೆ. ಪ್ರಧಾನಿ ಮೋದಿ ಅವರು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಗಾಗಿ ಪ್ರಬಲವಾದ ಒತ್ತಾಯ ಮಂಡಿಸಿದ ಬಳಿಕ ಮುಂಗಾರು ಅಧಿವೇಶನ ಮಹತ್ವ ಪಡೆದಿದೆ. ಯುಸಿಸಿ ಮತ್ತು ದೆಹಲಿಯ ಸುಗ್ರೀವಾಜ್ಞೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿರೋಧ ಪಕ್ಷಗಳು ಕೂಡ ಸಜ್ಜಾಗಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು