Categories: ದೆಹಲಿ

ಬಿಜೆಡಿ ತೊರೆದು ಬಿಜೆಪಿಗೆ ಸೇರಿದ ಭರ್ತೃಹರಿ ಮಹತಾಬ್

ದೆಹಲಿ: ಕಟಕ್‌ನ ಆರು ಬಾರಿ ಸಂಸದರಾಗಿರುವ ಭರ್ತೃಹರಿ ಮಹತಾಬ್ ಅವರು ಆಡಳಿತಾರೂಢ ಬಿಜು ಜನತಾ ದಳ ತೊರೆದು ಪ್ರಮುಖ ರಾಜ್ಯ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾರೆ.

2019 ರ ಸಾರ್ವತ್ರಿಕ ಚುನಾವಣೆಯಲ್ಲಿ, ಮಹತಾಬ್ ಅವರು ಕಟಕ್ ಲೋಕಸಭಾ ಸ್ಥಾನ ಗೆದ್ದಿದ್ದು, ಅವರ ಸಮೀಪ ಪ್ರತಿಸ್ಪರ್ಧಿ ಬಿಜೆಪಿಯ ಪ್ರಕಾಶ್ ಮಿಶ್ರಾ ಅವರನ್ನು ಭಾರಿ ಮತಗಳ ಅಂತರದಿಂದ ಸೋಲಿಸಿದರು.

ಮಹತಾಬ್ ಅವರು 1998 ರಲ್ಲಿ ಕಟಕ್‌ನಿಂದ ಲೋಕಸಭೆಗೆ ಮೊದಲ ಬಾರಿಗೆ ಆಯ್ಕೆಯಾಗಿದ್ದು ನಂತರ 1999, 2004, 2009, ಮತ್ತು 2014 ರಲ್ಲಿ ಲೋಕಸಭೆಗೆ ಮರು ಆಯ್ಕೆಯಾದರು.

67 ವರ್ಷದ ಭರ್ತೃಹರಿ ಮಹತಾಬ್  ಲೋಕಸಭೆ ಚುನಾವಣೆಗೆ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಸಂಸತ್ತಿನಲ್ಲಿ ಚರ್ಚೆಗಳಲ್ಲಿ ಅತ್ಯುತ್ತಮ ಪ್ರದರ್ಶನಕ್ಕಾಗಿ 2017 ರಿಂದ 2020 ರವರೆಗೆ ಸತತ ನಾಲ್ಕು ವರ್ಷಗಳ ಕಾಲ ಅವರಿಗೆ “ಸಂಸದ್ ರತ್ನ” ಪ್ರಶಸ್ತಿಯನ್ನು ನೀಡಲಾಯಿತು.

Ashika S

Recent Posts

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

45 mins ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

1 hour ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

1 hour ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

2 hours ago

ಇಂದು ಎಸ್​ಎಸ್​ಎಲ್​​ಸಿ ಫಲಿತಾಂಶ : ಎಷ್ಟು ಗಂಟೆಗೆ? ಎಲ್ಲಿ ನೋಡಬಹುದು?

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುದ್ದಿಗೋಷ್ಠಿ…

2 hours ago

ಡಾ. ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ನಗರದ ಕೆಎಂಸಿಯ ನ್ಯೂರೋಲಜಿ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಡಾ. ಜಿ.ಜಿ ಲಕ್ಷ್ಮಣ ಪ್ರಭು ಅವರಿಗೆ ದಿಲ್ಲಿಯ ರಾಷ್ಟ್ರೀಯ ವೈದ್ಯಕೀಯ…

2 hours ago