ನವದೆಹಲಿ: ಜನತಾ ದಳ(ಯುನೈಟೆಡ್) ಪಕ್ಷದ ಅಧ್ಯಕ್ಷರಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಕುರಿತು ಮಾತನಾಡಿದ ಪಕ್ಷದ ಮುಖ್ಯ ವಕ್ತಾರ ಕೆ ಸಿ ತ್ಯಾಗಿ, ಹಾಲಿ ಅಧ್ಯಕ್ಷ ಲಲನ್ ಸಿಂಗ್ ಅವರಿಂದ ಅಧಿಕಾರ ವಹಿಸಿಕೊಳ್ಳಲು ನಿತೀಶ್ ಕುಮಾರ್ ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.
ಇಂದು ಸಂಜೆ ನಡೆಯಲಿರುವ ಪಕ್ಷದ ರಾಷ್ಟ್ರೀಯ ಕೌನ್ಸಿಲ್ ಸಭೆಯು ಕಾರ್ಯಕಾರಿ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳನ್ನು ಅಂಗೀಕರಿಸಲಾಗುತ್ತದೆ. ಪಕ್ಷದ ಅತ್ಯಂತ ಪ್ರಮುಖ ಮುಖವಾಗಿರುವ ನಿತೀಶ್ ಕುಮಾರ್ ಅವರು ಈ ನಿರ್ಣಾಯಕ ಸಮಯದಲ್ಲಿ ಸಂಘಟನೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಪಕ್ಷದ ಇತರೆ ಹಿರಿಯ ನಾಯಕರು ಅಭಿಪ್ರಾಯಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.