ಬಕ್ಸರ್: ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ನಡೆದ ರೈಲು ದುರಂತ ಸಂಬಂಧ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಪೂರ್ವ ಕೇಂದ್ರ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಬೀರೇಂದ್ರ ಕುಮಾರ್ ತಿಳಿಸಿದ್ದಾರೆ.
ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಪರಿಹಾರ ನಿಧಿಯನ್ನು ರೈಲ್ವೆ ಇಲಾಖೆ ಘೋಷಿಸಿರುವುದಾಗಿ ಬೀರೇಂದ್ರ ಕುಮಾರ್ ತಿಳಿಸಿದ್ದಾರೆ. ಗಾಯಾಳುಗಳಿಗೆ ತಲಾ 50 ಸಾವಿರ ರೂ. ಪರಿಹಾರ ನೀಡುವುದಾಗಿ ಅವರು ಹೇಳಿದ್ದಾರೆ.