ಹೊಸದಿಲ್ಲಿ: ಇತ್ತೀಚೆಗೆ ಚುನಾವಣೆ ನಡೆದ 5 ರಾಜ್ಯಗಳ ಪೈಕಿ 4 ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಮತ ಎಣಿಕೆ ಆರಂಭವಾಗಿದೆ. ಈಗಾಗಲೇ ಅಂಚೆ ಮತ ಎಣಿಕೆ ಮುಗಿದಿದೆ.
ಮಿಜೋರಾಂ ರಾಜ್ಯದಲ್ಲಿ ನಾಳೆ ಮತಗಳ ಎಣಿಕೆಯಾಗಲಿದೆ. ಇಂದು ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್ಗಢದಲ್ಲಿ ಮಾತ್ರ ವಿಧಾನಸಭೆ ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಕೆಲವೇ ಗಂಟೆಗಳಲ್ಲಿ ಯಾವ ರಾಜ್ಯ ಯಾವ ಪಕ್ಷದ ತೆಕ್ಕೆಗೆ ಬೀಳಲಿದೆ ಎಂಬುದು ಸ್ಫಷ್ಟವಾಗಲಿದೆ.
ಸದ್ಯಕ್ಕೆ ತೆಲಂಗಾಣ ಹೊರತುಪಡಿಸಿ ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಸೆಣಸಾಟ ಕಂಡುಬರುತ್ತಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಮತ್ತು ಬಿಆರ್ಎಸ್ ನಡುವೆ ಸೆಣಸಾಟ ನಡೆಯುತ್ತಿದೆ. ಬಿಜೆಪಿ ಇಲ್ಲಿ ಪೂರ್ತಿ ಮಂಕಾಗಿದೆ.