Categories: ದೆಹಲಿ

ತ್ರಿಪುರಾ ಉಪಚುನಾವಣೆಯಲ್ಲಿ ‘ಬಿಜೆಪಿ’ಗೆ ಭರ್ಜರಿ ಗೆಲುವು

ನವದೆಹಲಿ: ತ್ರಿಪುರಾದ ಎರಡು ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಪಿ ಜಯಭೇರಿ ಬಾರಿಸಿದೆ. ಈ ತಿಂಗಳ 5ರಂದು ನಡೆದ ಬಕ್ಸಾನಗರ ಮತ್ತು ಧನ್‌ಪುರ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿತ್ತು. ಈ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ.

ಈ ಮೂಲಕ ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎಯನ್ನ ಎದುರಿಸುವ ಗುರಿ ಹೊಂದಿರುವ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾಗೆ ದೊಡ್ಡ ಹಿನ್ನಡೆಯಾಗಿದೆ.

ತ್ರಿಪುರದ ಸೆಪಾಹಿಜಾಲಾ ಜಿಲ್ಲೆಯ ಧನಪುರ ಮತ್ತು ಬಾಕ್ಸಾನಗರ ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ದೊಡ್ಡ ಗೆಲುವು ದಾಖಲಿಸಿದೆ. ಶೇ.66ರಷ್ಟು ಅಲ್ಪಸಂಖ್ಯಾತ ಮತದಾರರಿರುವ ಬಕ್ಸಾನಗರದಲ್ಲಿ ಬಿಜೆಪಿ ಅಭ್ಯರ್ಥಿ ತಫಜಲ್ ಹುಸೇನ್ 30,237 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಅಲ್ಲದೆ, ಬುಡಕಟ್ಟು ಜನಾಂಗದವರ ಸಂಖ್ಯೆ ಗಣನೀಯವಾಗಿರುವ ಧನಪುರದಲ್ಲಿ ಬಿಜೆಪಿ ಅಭ್ಯರ್ಥಿ ಬಿಂದು ದೇಬನಾಥ್ 18,871 ಮತಗಳ ಮುನ್ನಡೆಯೊಂದಿಗೆ ಗೆಲುವು ಸಾಧಿಸಿದ್ದಾರೆ.

Gayathri SG

Recent Posts

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

12 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

36 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

48 mins ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

1 hour ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

1 hour ago

ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ ಹೀಗಿದೆ!

ಚಿನ್ನ ಮತ್ತು ಬೆಳ್ಳಿ ಬೆಲೆ ಈ ವಾರವೂ ಏರಿಳಿತಗಳನ್ನು ಕಂಡಿದ್ದು, ಬೆಳ್ಳಿ ಬೆಲೆ ಕಳೆದ 10 ದಿನದಲ್ಲಿ ಗ್ರಾಮ್​ಗೆ 4…

2 hours ago