ದೆಹಲಿ

ಬಿಜೆಪಿ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕ

ನವದೆಹಲಿ: ಬಿಜೆಪಿ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾಗಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರ ಪುತ್ರ, ಶಾಸಕ ಬಿವೈ ವಿಜಯೇಂದ್ರ ಅವರನ್ನು ಶುಕ್ರವಾರ ಆಯ್ಕೆ ಮಾಡಲಾಗಿದೆ.

ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಲವು ತಿಂಗಳುಗಳಿಂದ ನಡೆಯುತ್ತಿದ್ದ ರಾಜ್ಯಾಧ್ಯಕ್ಷ ಆಯ್ಕೆ ಚರ್ಚೆಗೆ ತೆರೆ ಬಿದ್ದಂತಾಗಿದೆ.

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ಹುದ್ದೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕ ಸಿಟಿ ರವಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೆಸರು ಮುಂಚುಣಿಯಲ್ಲಿ ಕೇಳಿಬಂದಿತ್ತು. ಅಂತಿಮವಾಗಿ ಇದೀಗ ಬಿವೈ ವಿಜಯೇಂದ್ರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಬಿಜೆಪಿ ಹೈಕಮಾಂಡ್ ಮತ್ತೆ ಮಾಜಿ ಸಿಎಂ ಯಡಿಯೂರಪ್ಪಗೆ ಮಣೆ ಹಾಕಿದಂತಾಗಿದೆ.

Ashika S

Recent Posts

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

4 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

33 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

49 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

1 hour ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

1 hour ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago