ದೆಹಲಿ

ಕೆನಡಾ ಮೂಲದ ಖಲಿಸ್ತಾನಿ ಲಖ್ಬೀರ್ ಸಿಂಗ್ ಲಾಂಡಾ ಭಯೋತ್ಪಾದಕ ಎಂದು ಘೋಷಣೆ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೆನಡಾ ಮೂಲದ ದರೋಡೆಕೋರ ಲಖ್ಬೀರ್ ಸಿಂಗ್ ಲಾಂಡಾನನ್ನ ಭಯೋತ್ಪಾದಕ ಎಂದು ಭಾರತದ ಕೇಂದ್ರ ಗೃಹ ಸಚಿವಾಲಯ ಘೋಷಿಸಿದ್ದು, ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದೆ.

ಮಾಹಿತಿ ಪ್ರಕಾರ, 1989ರಲ್ಲಿ ಪಂಜಾಬ್‌ನ ತರ್ನ್ ತರನ್ ಜಿಲ್ಲೆಯಲ್ಲಿ ಜನಿಸಿದ ಲಾಂಡಾ 2017ರಲ್ಲಿ ಕೆನಡಾಕ್ಕೆ ಪಲಾಯನ ಮಾಡಿದ. ಕೆಲ ವರ್ಷಗಳಿಂದ ಕೆನಡಾದಲ್ಲಿ ನೆಲೆಸಿದ್ದು, ಖಲಿಸ್ತಾನಿ ಗ್ರೂಪ್ ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್ (ಬಿಕೆಐ)ಗೆ ಸೇರಿದ್ದಾನೆ. 2021ರಲ್ಲಿ ಮೊಹಾಲಿಯಲ್ಲಿರುವ ಪಂಜಾಬ್ ಪೊಲೀಸ್ ಇಂಟೆಲಿಜೆನ್ಸ್ ಮುಖ್ಯಕಚೇರಿ ಮೇಲೆ ರಾಕೆಟ್ ದಾಳಿಯ ಯೋಜನೆಯಲ್ಲಿ ಈತ ಭಾಗಿಯಾಗಿದ್ದನು ಎಂದು ವಿವರಿಸಲಾಗಿದೆ.

ಅಲ್ಲದೇ ಈತ ಪಾಕಿಸ್ತಾನ ಮೂಲದ ದರೋಡೆಕೋರ ಹರ್ವಿಂದರ್ ಸಿಂಗ್‌ ಜೊತೆಗೆ ನಿಕಟ ಸಂಪರ್ಕ ಹೊಂದಿದ್ದ. ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿರುವ ವಿವಿಧ ಘಟಕಗಳಿಗೆ ಸುಧಾರಿತ ಸ್ಫೋಟಕ ಸಾಧನಗಳು, ಅತ್ಯಾಧುನಿಕ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನ ಪೂರೈಕೆ ಮಾಡುತ್ತಿದ್ದ.

ಪಂಜಾಬ್‌ನಲ್ಲಿ ಮಾತ್ರವಲ್ಲದೇ ದೇಶದ ಇತರ ಭಾಗಗಳಲ್ಲಿ ಭಯೋತ್ಪಾದಕ ಕೃತ್ಯಗಳನ್ನು ಎಸಗಲು ಹಣ ಪೂರೈಕೆ ಮಾಡುತ್ತಿದ್ದ. ಹೀಗೆ ಸಾಕಷ್ಟು ಕ್ರಿಮಿನಲ್‌ ಪ್ರಕರಣಗಳಲ್ಲಿ ಭಾಗಿಯಾಗಿರುವ ಲಾಂಡಾ, ಕೆನಡಾ ಮೂಲದ ಹಲವಾರು ಖಲಿಸ್ತಾನಿ ಭಯೋತ್ಪಾದಕರೊಂದಿಗೆ ನಿಕಟ ಸಂಬಂಧ ಹೊಂದಿದ್ದ. ಸಿಖ್ಸ್ ಫಾರ್ ಜಸ್ಟಿಸ್‌ನ ಗುರುಪತ್‌ವಂತ್ ಸಿಂಗ್ ಪನ್ನುನ್ ಮತ್ತು ಖಲಿಸ್ತಾನ್ ಟೈಗರ್ ಫೋರ್ಸ್ (ಕೆಟಿಎಫ್)ನ ಮೃತ ಹರ್ದೀಪ್ ಸಿಂಗ್ ನಿಜ್ಜರ್ ಜೊತೆಗೂ ಸಂಪರ್ಕ ಬೆಳೆಸಿದ್ದ ಎಂದು ಗೃಹ ಸಚಿವಾಲಯ ತಿಳಿಸಿದೆ.

Ashika S

Recent Posts

ಬ್ಯಾಂಕ್ ಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬೇಡಿ: ಡಿಸಿ

ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…

6 hours ago

ಕೇರಳದ 9 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ  ಬಹುತೇಕ ಭಾಗಗಳಲ್ಲಿ  ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

6 hours ago

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ: ಬಾವಲಿ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.

6 hours ago

ಬಿರುಗಾಳಿಯೊಂದಿಗೆ ಸುರಿದ ಮಳೆ: ಮಾವು, ಪಪ್ಪಾಯಿ ಬೆಳೆಗೆ ಹಾನಿ

ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.

7 hours ago

ಚಾಮರಾಜನಗರ: ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವು

ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ   ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

7 hours ago

ಸಾಮಾನ್ಯ ಪ್ರಯಾಣಿಕರಂತೆ ಟಿಕೆಟ್‌ ಪಡೆದು ಬಸ್‌ನಲ್ಲಿ ಸಂಚರಿಸಿದ ನ್ಯಾಯಾಧೀಶ

ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.

7 hours ago