News Karnataka Kannada
Tuesday, April 23 2024
Cricket
ದೆಹಲಿ

ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಸಿಎ​​ಪಿಎಫ್​ ಹುದ್ದೆ ನೇಮಕಾತಿ ಪರೀಕ್ಷೆಗೆ ಅವಕಾಶ

ಫೆಬ್ರವರಿ 20 ರಿಂದ ಮಾರ್ಚ್ 7 ರ ವರೆಗೆ 128 ನಗರಗಳಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPFs) ಕಾನ್‌ಸ್ಟೆಬಲ್‌ಗಳ ನೇಮಕಾತಿ ಪರೀಕ್ಷೆ ನಡೆಯಲಿದ್ದು, ಈ ಬಾರೀ ​ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಕೇಂದ್ರ ಗೃಹ ಸಚಿವಾಲಯ ಅವಕಾಶ ನೀಡಿದೆ.
Photo Credit : News Kannada

ದೆಹಲಿ: ಫೆಬ್ರವರಿ 20 ರಿಂದ ಮಾರ್ಚ್ 7 ರ ವರೆಗೆ 128 ನಗರಗಳಲ್ಲಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPFs) ಕಾನ್‌ಸ್ಟೆಬಲ್‌ಗಳ ನೇಮಕಾತಿ ಪರೀಕ್ಷೆ ನಡೆಯಲಿದ್ದು, ಈ ಬಾರೀ ​ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಗೆ ಬರೆಯಲು ಕೇಂದ್ರ ಗೃಹ ಸಚಿವಾಲಯ ಅವಕಾಶ ನೀಡಿದೆ.

ಕಾನ್‌ಸ್ಟೆಬಲ್ (ಜಿಡಿ) ನೇಮಕಾತಿ ಪರೀಕ್ಷೆಗೆ ಈಗಾಗಲೇ ಸುಮಾರು ಐದು ಮಿಲಿಯನ್ ಅಭ್ಯರ್ಥಿಗಳು ನೊಂದಾಯಿಸಿಕೊಂಡಿದ್ದು, ಲಿಖಿತ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಹೊರತುಪಡಿಸಿ ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ತಮಿಳು, ತೆಲುಗು, ಒಡಿಯಾ, ಉರ್ದು, ಪಂಜಾಬಿ, ಮಣಿಪುರಿ, ಕೊಂಕಣಿ ಭಾಷೆಗಳಲ್ಲಿ ಪರೀಕ್ಷೆಗೆ ಅವಕಾಶ ನೀಡಲಾಗಿದೆ. ಇದೇ ಮೊದಲ ಬಾರಿಗೆ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯನ್ನು ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುತ್ತಿದೆ. ಇಲ್ಲಿಯವರೆಗೆ, ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆಗೆ ಅವಕಾಶವಿತ್ತು.

‘ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಮತ್ತು ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ಮೇರೆಗೆ ಈ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ’ ಎಂದು ಅಧಿಕೃತ ವಕ್ತಾರರು ತಿಳಿಸಿರುವುದಾಗಿ ವರದಿ ಆಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು