News Karnataka Kannada
Monday, April 29 2024
ದೆಹಲಿ

ಜಾತಿ ಮಾತುಗಳು ರಾಜಕಾರಣದಲ್ಲಿ ಅಪ್ರಸ್ತುತ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

C M Basavaraj Bommai
Photo Credit : News Kannada

ನವದೆಹಲಿ: ಜಾತಿ ಮಾತುಗಳು ರಾಜಕಾರಣದಲ್ಲಿ ಅಪ್ರಸ್ತುತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ನಮ್ಮ ಪಕ್ಷ ಹಾಗೂ ಅದರ ಕಾರ್ಯಕ್ರಮಗಳು ಏನು ಮಾಡಲು ಸಾಧ್ಯ ಎಂಬ ಬಗ್ಗೆ ಮಾತನಾಡಿದರೆ ಜನ ಚಿಂತನೆ ಮಾಡುತ್ತಾರೆಯೇ ಹೊರತಾಗಿ ವೈಯಕ್ತಿಕ ಮಾತು ಗಳು ಪ್ರಸ್ತುತವಲ್ಲ ಎಂದರು.

ಜೆಡಿಎಸ್ ನಾಯಕ ಎಚ್.‌ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ನಮ್ಮ ಪಕ್ಷದ ಬಗ್ಗೆ ಅವರು ಚಿಂತಿಸಬೇಕಿಲ್ಲ. ಜೆಡಿಎಸ್ ಮೊದಲು ಅವರ ಪಕ್ಷ ಸರಿಮಾಡಿಕೊಳ್ಳಲಿ. ಬ್ರಾಹ್ಮಣರು ಎಂದೆಲ್ಲಾ ಜನ ನೋಡುವುದಿಲ್ಲ ಎಂದರು.

ಕಾನೂನು ಕ್ರಮ
ಮದುವೆಯೊಂದರಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿರುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಶಾಸಕ ರಮೇಶ್ ಜಾರಳಿಹೊಳಿ ತಮ್ಮನ್ನು ಭೇಟಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ವಿವರಗಳನ್ನು ನೀಡಿದರೆ ಕಾನೂನು ಪ್ರಕಾರ ಕೆಲಸ ಮಾಡುತ್ತೇವೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು