News Karnataka Kannada
Monday, April 29 2024
ದೆಹಲಿ

ದೆಹಲಿಯಲ್ಲಿ ಇಂದು ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ

Cauvery Water Regulation Committee to meet in Delhi today
Photo Credit : IANS

ನವದೆಹಲಿ: ಕಾವೇರಿ ನದಿ ನೀರು ವಿವಾದ ಸಂಬಂಧ ಇಂದು (ಅ.30) ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಡೆಯಲಿದೆ. ಅಕ್ಟೋಬರ್ ಅಂತ್ಯದ ವರಗೆ 3 ಸಾವಿರ ಕ್ಯೂಸೆಕ್ಸ್ ಹರಿಸುವಂತೆ ಮಾಡಿದ್ದ ಆದೇಶ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ 2 ಗಂಟೆಗೆ ನವದೆಹಲಿಯಲ್ಲಿ ಸಭೆ ನಡೆಯಲಿದ್ದು, ಮುಂದಿನ ಅವಧಿಗೆ ನೀರು ಹರಿಸುವ ಬಗ್ಗೆ ಸಭೆಯಲ್ಲಿ ನಿರ್ಧಾರವಾಗಲಿದೆ.

ಈ ವರ್ಷ ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ಎದುರಾಗಿದೆ. ಮಳೆ ಇಲ್ಲದೇ ಜನ-ಜಾನುವಾರುಗಳು ಹನಿ ನೀರಿಗೂ ಪರದಾಡುವಂತಹ ಸ್ಥಿತಿ ಕೆಲವೆಡೆ ಇದೆ. ಡ್ಯಾಂಗಳು ಬತ್ತಿ ಹೋಗಿವೆ. ಇದರ ಮಧ್ಯೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶ ನೀಡುತ್ತಾ ಬಂದಿವೆ.

ಆದೇಶದಂತೆ ಪ್ರಸ್ತುತ ಕರ್ನಾಟಕ ಪ್ರತಿದಿನ 3 ಸಾವಿರ ಕ್ಯೂಸೆಕ್ಸ್ ನೀರು ಹರಿಸುತ್ತಿದೆ. ಸದ್ಯ ಇಂದು ಮತ್ತೇ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ನಿಗದಿಯಾಗಿದ್ದು ಸಮಿತಿ ಮತ್ತೆ ಯಾವ ನಿರ್ಧಾರ ತೆಗೆದುಕೊಳ್ಳೊತ್ತೋ ಎಂಬ ಆತಂಕ ಎದುರಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು