News Karnataka Kannada
Tuesday, April 30 2024
ದೆಹಲಿ

ಲಂಚ ಆರೋಪ: ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆಗೆ ಆದೇಶ

CBI probe ordered against MP Mahua Moitra over bribery allegations
Photo Credit : Facebook

ನವದೆಹಲಿ: ಸಂಸತ್ತಿನಲ್ಲಿ ಕೈಗಾರಿಕೋದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆಗಳನ್ನು ಕೇಳುವುದಕ್ಕೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಲಂಚ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ  ಅವರ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಲಾಗಿದೆ.

ಕೈಗಾರಿಕೋದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆಗಳನ್ನು ಕೇಳುವುದಕ್ಕೆ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಹಣಕಾಸಿನ ಅನುಕೂಲಗಳು ಹಾಗೂ ಉಡುಗೊರೆಗಳ  ಮೊಯಿತ್ರಾ ಲಂಚ ರೂಪದಲ್ಲಿ ಪಡೆದಿದ್ದಾರೆ ಎಂದು ಬಿಜೆಪಿ ಸಂಸ ದುಬೆ ಆರೋಪಿಸಿದ್ದರು.

‘ನನ್ನ ದೂರಿನ ಆಧಾರದ ಮೇಲೆ, ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಆರೋಪಿ ಸಂಸದ ಮಹುವಾ ಮೊಯಿತ್ರಾ ಅವರ ಭ್ರಷ್ಟಾಚಾರದ ಬಗ್ಗೆ ಇಂದು ಲೋಕಪಾಲ್ ಸಿಬಿಐ ತನಿಖೆಗೆ ಆದೇಶಿಸಿದೆ’ ಎಂದು ನಿಶಿಕಾಂತ್ ದುಬೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಲಂಚದ ಆರೋಪವನ್ನು ಟಿಎಂಸಿ ಸಂಸದೆ ನಿರಾಕರಿಸಿದ್ದರು. ಆದರೆ ಸಂಸತ್ತಿನ ಲಾಗಿನ್ ಮತ್ತು ಪಾಸ್‌ವರ್ಡ್ ವಿವರಗಳನ್ನು ಸ್ನೇಹಿತ ಮತ್ತು ಉದ್ಯಮಿ ದರ್ಶನ್ ಹಿರಾನಂದನಿಗೆ ನೀಡಿದ್ದಾಗಿ ನಂತರ ಒಪ್ಪಿಕೊಂಡಿದ್ದರು.

ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಲೋಕಪಾಲ್ ಸಿಬಿಐ ತನಿಖೆಗೆ ಆದೇಶಿಸಿದೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ ಹೇಳಿದ್ದಾರೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು