News Karnataka Kannada
Tuesday, April 30 2024
ದೆಹಲಿ

ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ನಿವಾಸದಲ್ಲಿ ಸಿಬಿಐನಿಂದ ಶೋಧ

New Project
Photo Credit : NewsKarnataka

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರ ನಿವಾಸ ಸೇರಿದಂತೆ ಕೋಲ್ಕತ್ತಾ ಮತ್ತು ಅವರಿಗೆ ಸಂಬಂಧಿಸಿದ ಇತರ ಸ್ಥಳಗಳಲ್ಲಿ ಸಿಬಿಐ ಶೋಧ ನಡೆಸುತ್ತಿದೆ ಎಂದು ವರದಿ ಹೇಳಿದೆ.

ಕೇಂದ್ರ ತನಿಖಾ ಸಂಸ್ಥೆಯ ತಂಡಗಳು ಶನಿವಾರ ಬೆಳಗ್ಗೆ ಮೊಯಿತ್ರಾ ಅವರ ಕೋಲ್ಕತ್ತಾ ನಿವಾಸ ಮತ್ತು ಇತರ ನಗರಗಳನ್ನು ಶೋಧ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಆರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಲೋಕಪಾಲ್ ನಿರ್ದೇಶನದ ಮೇರೆಗೆ ಸಿಬಿಐ ಗುರುವಾರ ಟಿಎಂಸಿ ಮಾಜಿ ಸಂಸದರ ವಿರುದ್ಧ ಎಫ್‌ಐಆರ್ ದಾಖಲಿಸಿದೆ.

ಡಿಸೆಂಬರ್‌ನಲ್ಲಿ ಸಂಸತ್ತಿನಿಂದ ಮಹುವಾ ಮೊಯಿತ್ರಾ ಅವರನ್ನು ಹೊರಹಾಕಲಾಯಿತು. ಈ ಕ್ರಮವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು ಮತ್ತು ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದ ಕೃಷ್ಣನಗರ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಮತ್ತೆ ಕಣಕ್ಕಿಳಿಯಲಿದ್ದಾರೆ. ಲೋಕಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಅದಾನಿ ವಿರುದ್ಧ ಮಾತನಾಡಲು ಹಣ ಪಡೆದಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಮೊಯಿತ್ರಾ ವಿರುದ್ಧ ಆರೋಪಿಸಿದ್ದರು.

ಈ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಯ ವರದಿಯನ್ನು ಪಡೆದು ಭ್ರಷ್ಟಾಚಾರ ವಿರೋಧಿ ಸಂಸ್ಥೆ ಒಂಬುಡ್ಸ್‌ಮನ್ ಲೋಕಪಾಲ್, ಸಿಬಿಐಗೆ ಈ ಬಗ್ಗೆ ನಿರ್ದೇಶನಗಳನ್ನು ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು