Categories: ದೆಹಲಿ

ಪಂಚ ಬೆಳೆಗಳಿಗೆ MSP ಪ್ರಸ್ತಾವನೆ; ಐದು ವರ್ಷಗಳ ಒಪ್ಪಂದಕ್ಕೆ ರೈತರ ಒಪ್ಪಿಗೆ?

ನವದೆಹಲಿ: ಸರ್ಕಾರದ ಮುಂದೆ ವಿವಿಧ ಬೇಡಿಕೆಗಳನ್ನಿಟ್ಟು ಪ್ರತಿಭಟಿಸುತ್ತಿರುವ ರೈತರ ಎದುರು ದೇಶಾದ್ಯಂತ ಎಂಎಸ್‌ಪಿ ಖಾತರಿ ಕಾನೂನು ನೀಡುವ ಪ್ರಸ್ತಾಪ ಮಾಡಿದ್ದು, ಕೃಷಿಕರು ಅದಕ್ಕಿ ಒಪ್ಪಿಗೆ ಸೂಚಿಸಿದರೆ ಭಾರತೀಯ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ (NAFED) ಮತ್ತು ಕಾಟನ್ ಕಾರ್ಪೊರೇಷನ್ ಆಫ್ ಇಂಡಿಯಾ (CCI) ನೊಂದಿಗೆ ಐದು ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಬೇಕು ಎಂದು ಕೇಂದ್ರ ಸರ್ಕಾರದ ನಿಯೋಗ ತಿಸಿದೆ.

ಕೃಷಿ ಸಚಿವ ಅರ್ಜುನ್ ಮುಂಡಾ ನೇತೃತ್ವದಲ್ಲಿ ರೈತ ಮುಖಂಡರೊಂದಿಗೆ ನಡೆದ ಸಭೆಯಲ್ಲಿ ಹೆಸರುಕಾಳು, ಉದ್ದಿನಬೇಳೆ, ಮೆಕ್ಕೆಜೋಳ ಮತ್ತು ಹತ್ತಿ ಬೆಳೆಗಳಿಗೆ MSP ಕೊಡುವ ಪ್ರಸ್ತಾವವನ್ನು ಮಾಡಲಾಯಿತು. ರೈತರ ಒಪ್ಪಿಗೆಯಿದ್ದಲ್ಲಿ, ಮೊದಲ ಹಂತದ ಯೋಜನೆ ಜಾರಿ ಮಾಡಿ, ಮುಂದಿನ ಹಂತದಲ್ಲಿ ಬೇರೆ ಬೆಳೆಗಳಿಗೂ ವಿಸ್ತರಿಸುವ ಬಗ್ಗೆ ಯೋಚನೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಉಳಿದ ಬೇಡಿಕೆಗಳಾದ ರೈತರ ಸಾಲ ಮನ್ನಾ, ಸ್ವಾಮಿನಾಥನ್ ವರದಿ ಜಾರಿ, WTO ಒಪ್ಪಂದ, ರೈತರಿಗೆ ಪಿಂಚಣಿ ನೀಡುವ ಯೋಜನೆ, ಬೆಳೆ ವಿಮೆ ಪದ್ಧತಿ, ಕಳೆದ ವರ್ಷ ಹೋರಾಟದಲ್ಲಿ ಪ್ರಾಣತ್ಯಾಗ ಮಾಡಿದ 750 ರೈತ ಕುಟುಂಬಕ್ಕೆ ಸರ್ಕಾರದ ನೆರವುಗಳ ಬಗ್ಗೆ ಚರ್ಚಿಸಲಾಗುವುದು ಎಂದು ಕೆಂದ್ರ ಸರ್ಕಾರದ ಪರವಾಗಿ ಸಚಿವ ಪಿಯುಷ್ ಗೋಯಲ್ ಹೇಳಿದ್ದಾರೆ.

ಸರ್ಕಾರದ ಪ್ರಸ್ತಾವನೆಯ ಬಗ್ಗೆ ಇನ್ನೂರಕ್ಕೂ ಹೆಚ್ಚು ಸಂಘಟನೆಗಳ ಮುಖಂಡರ ಜೊತೆ ಹಾಗೂ ವಿಷಯ ಪರಿಣಿತರ ಜೊತೆ ಚರ್ಚೆ ಮಾಡಿ ನಿರ್ಧರಿಸಲಾಗುವುದು ಎಂದು ರೈತ ಮುಖಂಡ ಜಗಜಿತ್ ಸಿಂಗ್ ದಲೆವಾಲ ಹೇಳಿದ್ದಾರೆ. ಸಭೆಯಲ್ಲಿ ಕರ್ನಾಟಕ ರಾಜ್ಯದ ರೈತ ಮುಖಂಡರಾದ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ದಕ್ಷಿಣ ಭಾರತ ಸಂಚಾಲಕ ಕುರುಬೂರ್ ಶಾಂತಕುಮಾರ್ ಭಾಗಿಯಾಗಿದ್ದರು.

Maithri S

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

7 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

7 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

7 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

8 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

8 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

8 hours ago