ನವದೆಹಲಿ : ಹೊಸ ಅಧ್ಯಕ್ಷ ಸಂಜಯ್ ಸಿಂಗ್ ಅವರ ನೇತೃತ್ವದ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಕೇಂದ್ರ ಕ್ರೀಡಾ ಸಚಿವಾಲಯ ಭಾನುವಾರ ಸಸ್ಪೆಂಡ್ ಮಾಡಿದೆ.
ಆದೇಶ ಪತ್ರ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ, ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ನಿಕಟವರ್ತಿ, ಹೊಸದಾಗಿ ಆಯ್ಕೆಯಾದ ಅಧ್ಯಕ್ಷ ಸಂಜಯ್ ಸಿಂಗ್ ನೇತೃತ್ವದ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಸ್ತಿತ್ವದಲ್ಲಿದ್ದ ನಿಯಮಗಳನ್ನು ಪಾಲಿಸಲಿಲ್ಲ ಎಂದು ಆರೋಪಿಸಿದೆ.