News Karnataka Kannada
Monday, April 29 2024
ದೆಹಲಿ

ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರನ್ನು ಭೇಟಿಯಾದ ಸಿಎಂ ಸಿದ್ದು

Cm Sidhu meets cricket god Sachin Tendulkar
Photo Credit : News Kannada

ದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರನ್ನು ಆಕಸ್ಮಿಕವಾಗಿ ಭೇಟಿಯಾಗಿ, ಉಭಯ ಕುಶಲೋಪರಿ ವಿಚಾರಿಸಿದರು.

ಕೇಂದ್ರ ಸಚಿವರ ಭೇಟಿ ಹಾಗೂ ಇನ್ನಿತರ ಕಾರ್ಯಕ್ರಮಗಳ ನಿಮಿತ್ತ ದೆಹಲಿ ಪ್ರವಾಸ ಕೈಗೊಂಡಿರುವ ಸಿದ್ದರಾಮಯ್ಯ ಅವರು ದೆಹಲಿಯ ವಿಮಾನ ನಿಲ್ದಾಣದಲ್ಲಿ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರನ್ನು ಭೇಟಿಯಾಗಿ, ಕುಶಲೋಪರಿ ವಿಚಾರಿಸಿ, ಬೀಳ್ಕೊಟ್ಟರು.

ಸಿದ್ದರಾಮಯ್ಯ ಅವರು ತಮ್ಮ ನೆಚ್ಚಿನ‌ ಕ್ರಿಕೆಟಿಗನನ್ನು ಭೇಟಿಯಾದ ಖುಷಿಯ ಸಂಗತಿಯನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

“ಜಾಗತಿಕ ಕ್ರಿಕೆಟ್‌ನ ದಂತಕಥೆ, ಲಿಟ್ಲ್ ಮಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಇಂದು ದೆಹಲಿಯ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಎದುರಾದ ವೇಳೆ ಕುಶಲೋಪರಿ ವಿಚಾರಿಸಿ, ಪ್ರೀತಿಯಿಂದ ಬೀಳ್ಕೊಟ್ಟೆ. ಸಚಿನ್ ತೆಂಡೂಲ್ಕರ್ ನನ್ನ ಅಚ್ಚುಮೆಚ್ಚಿನ ಆಟಗಾರ, ದಶಕಗಳ ಕಾಲ ತೆಂಡೂಲ್ಕರ್ ಅವರ ಆಟವನ್ನು ಆಸ್ವಾದಿಸಿದ್ದೇನೆ.” ಎಂದು ತಮ್ಮ ಸಂತಸ ಹಂಚಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು