ದೆಹಲಿ

ಅಯೋಧ್ಯೆಯ ಪರಂಪರೆ ರಕ್ಷಿಸಲು ಬದ್ಧ ಎಂದ ಪ್ರಧಾನಿ ಮೋದಿ

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಅಯೋಧ್ಯೆಯಲ್ಲಿ ಒಟ್ಟು 15,000 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಹೂಡಿಕೆಯ ಹಲವು ಯೋಜನೆಗಳನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ.

ನಗರದಲ್ಲಿ ವಿಶ್ವ ದರ್ಜೆಯ ಮೂಲಸೌಕರ್ಯಗಳನ್ನು ನಿರ್ಮಿಸಲು ತಮ್ಮ ಸರ್ಕಾರ ತೀರ್ಮಾನಿಸಿದ್ದು, ಆ ವಿಚಾರದಲ್ಲಿ ಬದ್ಧವಾಗಿದೆ ಎಂದು ಅಯೋಧ್ಯೆ ಭೇಟಿಗೂ ಮುನ್ನ ಮೋದಿ ತಿಳಿಸಿದ್ದಾರೆ.

ನಮ್ಮ ಸರ್ಕಾರವು ವಿಶ್ವ ದರ್ಜೆಯ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು, ಸಂಪರ್ಕವನ್ನು ಸುಧಾರಿಸಲು ಮತ್ತು ಭಗವಾನ್ ಶ್ರೀರಾಮನ ನಗರವಾದ ಅಯೋಧ್ಯೆಯ ಶ್ರೀಮಂತ ಪರಂಪರೆಯನ್ನು ಸಂರಕ್ಷಿಸಲು ನಿರ್ಧರಿಸಿದ್ದು ಅದಕ್ಕೆ ಬದ್ಧವಾಗಿದೆ. ಈ ದಿಸೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿಮಾನ ನಿಲ್ದಾಣ ಹಾಗೂ ಮರು ಅಭಿವೃದ್ಧಿ ಪಡಿಸಿದ ರೈಲು ನಿಲ್ದಾಣವನ್ನು ನಾಳೆ ಉದ್ಘಾಟಿಸಲಿದ್ದೇನೆ.

ಇದರೊಂದಿಗೆ ಇನ್ನೂ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡುವ ಭಾಗ್ಯ ನನ್ನದಾಗಿದೆ. ಇದು ಅಯೋಧ್ಯೆ ಮತ್ತು ಉತ್ತರ ಪ್ರದೇಶ ಸೇರಿದಂತೆ ದೇಶದ ಹಲವು ಪ್ರದೇಶಗಳಲ್ಲಿರುವ ನನ್ನ ಕುಟುಂಬ ಸದಸ್ಯರ ಜೀವನವನ್ನು ಸುಲಭಗೊಳಿಸಲಿದೆ’ ಎಂದು ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಉಲ್ಲೇಖಿಸಿದ್ದಾರೆ.

Ashika S

Recent Posts

ಹೂಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

39 seconds ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

10 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

14 mins ago

ಮಡಿಕೇರಿಯಲ್ಲಿ ಬುದ್ಧಿಮಾಂದ್ಯ ಹುಡುಗನ ರಕ್ಷಣೆ; ಸಂಬಂಧಪಟ್ಟವರು ಸಂಪರ್ಕಿಸುವಂತೆ ಮನವಿ

ಅನಾಥ ಬುದ್ಧಿಮಾಂದ್ಯ ಹುಡುಗನನ್ನು ರಕ್ಷಣೆ ಮಾಡಿ ಶಕ್ತಿ ಅನಾಥಾಶ್ರಮಕ್ಕೆ ಸೇರಿಸಿರುವ ಘಟನೆಯೊಂದು ಮಡಿಕೇರಿಯಲ್ಲಿ ನಡೆದಿದೆ.

19 mins ago

ಗ್ರಾಹಕರಂತೆ ಬಂದು ಬಂಗಾರದ ಬಳೆ ಎಗರಿಸಿದ ಖತರ್ನಾಕ್ ಕಳ್ಳಿಯರ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ಗ್ರಾಹಕರ ಸೋಗಿನಲ್ಲಿ ಬಂದು ಬಂಗಾರದ ಖಡ್ಗ ಕದ್ದು ಪರಾರಿಯಾದ ಘಟನೆ ಕಲಬುರಗಿ ನಗರದ ಅನ್ನಪೂರ್ಣ ಕ್ರಾಸ್‌ನಲ್ಲಿರುವ ತನಿಷ್ಕ ಜ್ಯುವೆಲ್ಲರಿ ಶಾಪ್‌ನಲ್ಲಿ…

22 mins ago

ವಿಧಾನಸೌಧ ಪ್ರವೇಶಕ್ಕೆ ಇನ್ನು ಮುಂದೆ ಕ್ಯೂಆರ್ ಕೋಡ್ ಪಾಸ್‌: ಪರಮೇಶ್ವರ್‌

ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್‌ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

40 mins ago