News Karnataka Kannada
Sunday, May 12 2024
ದೆಹಲಿ

ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ ಕಂಡಕ್ಟರ್

Conductor rapes woman on pretext of getting her job
Photo Credit : IANS

ನವದೆಹಲಿ: ಬಸ್‌ ಕಂಡಕ್ಟರ್ ನಿಂದ ಅತ್ಯಾಚಾರವಾಗಿದೆ ಎಂದು ಆರೋಪ ಕೇಳಿಬಂದಿದೆ. ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ದೆಹಲಿ ಸಾರಿಗೆ ನಿಗಮದ ಕಂಡಕ್ಟರ್ ಅನ್ನು ದೆಹಲಿ ಪೊಲೀಸರು ಬಂಧಿಸಿರುವ ಘಟನೆ ಉತ್ತರ ದೆಹಲಿಯ ತಿಮಾರ್‌ಪುರ ಪ್ರದೇಶದಲ್ಲಿ ನಡೆದಿದೆ‌.

ಮಹಿಳೆಯ ದೂರು ಆಧರಿಸಿ ಪ್ರಕರಣ ದಾಖಲಿಸಿದ್ದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

2010 ರಿಂದ 2017 ರವರೆಗೆ ಡಿಟಿಸಿಯಲ್ಲಿ ಟೈಪಿಸ್ಟ್ ಆಗಿ ಕೆಲಸ ಮಾಡಿದ್ದ ಸಂತ್ರಸ್ತ ಮಹಿಳೆ ಮಗುವಾದ ನಂತರ ಕೆಲಸ ಮಾಡುವುದನ್ನು ನಿಲ್ಲಿಸಿದ್ದಳು. ಎರಡು ವರ್ಷಗಳ ಹಿಂದೆ ಆರೋಪಿಯನ್ನು ಭೇಟಿಯಾಗಿ ಮತ್ತೆ ಕೆಲಸ ಕೊಡಿಸಲು ಮನವಿ ಮಾಡಿದ್ದಳು. ಮನೆಗೆ ಬಂದ ಆಕೆಗೆ ಜ್ಯೂಸ್‌ನಲ್ಲಿ ಮತ್ತು ಬರುವ ಮಾತ್ರೆ ಹಾಕಿ, ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಲಾಗಿದೆ ಎಂದು ವರದಿಯಾಗಿದೆ.

ಇನ್ನು ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಿದ್ದು, ಪ್ರಕರಣದಲ್ಲಿ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು